ಚಾಮರಾಜನಗರ: ಲೋಕಾಯುಕ್ತ ಅಧಿಕಾರಿಗಳು ಅ.16 ರಂದು ಕೊಳ್ಳೇಗಾಲ ತಾಲೂಕಿನ ಪ್ರವಾಸಿಮಂದಿರಕ್ಕೆ ಭೇಟಿ ನೀಡಿ ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳ ಅನಗತ್ಯ ವಿಳಂಬ, ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ನಮೂನೆ-1 ಮತ್ತು 2ರಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.