

ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಕಚೇರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಆಡಳಿತ ಸಹಾಯಕ, ಲೆಕ್ಕ ಸಹಾಯಕ, ಗ್ರೂಪ್ ಡಿ, ಸೆಕ್ಯೂರಿಟಿ, ಹೌಸ್ ಕೀಪಿಂಗ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಡಳಿತ ಸಹಾಯಕ ಒಂದು ಹುದ್ದೆಗೆ ಯಾವುದಾದರೂ ವಿಷಯದಲ್ಲಿ ಪದವಿ ಹೊಂದಿರಬೇಕು. ಲೆಕ್ಕ ಸಹಾಯಕ ಒಂದು ಹುದ್ದೆಗೆ ಬಿ.ಕಾಂ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಟೈಪಿಂಗ್ ಮಾಡುವ ಜ್ಞಾನ ಮತ್ತು ಕೌಶಲವಿರಬೇಕು. ಬಹು ಕಾಯಕ ಕೆಲಸಗಾರ 3 ಹುದ್ದೆಗೆ (ಗ್ರೂಪ್ ಡಿ, ಸೆಕ್ಯೂರಿಟಿ, ಹೌಸ್ ಕೀಪಿಂಗ್) ಕನಿಷ್ಠ 10ನೇ ತರಗತಿ ಪೂರ್ಣಗೊಂಡಿರಬೇಕು. ಈ ಎಲ್ಲ ಹುದ್ದೆಗಳಿಗೆ ಕನಿಷ್ಟ ಮೂರು ವರ್ಷಗಳು ಸರ್ಕಾರ ಅಥವಾ ಇತರ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅಂತಿಮ ದಿನಾಂಕದ ನಂತರ ಸಲ್ಲಿಸುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಕಾಲಕಾಲಕ್ಕೆ ಇಲಾಖೆಯಿಂದ ಹೊರಡಿಸುವ ಆದೇಶಗಳಿಗೆ ಬದ್ಧರಾಗಿರಬೇಕು. ನೌಕರರ ನೇಮಕ ಅಥವಾ ರದ್ದುಗೊಳಿಸುವ ಅಧಿಕಾರವು ಸಕ್ಷಮ ಪ್ರಾಧಿಕಾರಿಯ ವಿವೇಚನೆಗೆ ಒಳಪಟ್ಟಿದೆ. ಆಸಕ್ತ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ಪಂಚಾಯತ್ ಕಚೇರಿಯ ಕೊಠಡಿ ಸಂಖ್ಯೆ 14ರಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅ.30ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.