ಹಳೆಯ ಬಸ್ ಪುನಶ್ಚೇತನಕ್ಕಾಗಿ ಪ್ರಶಂಸೆ

26f01610-b500-46cf-9bb4-d0a61c4bd65a
Published on

ಚಾಮರಾಜನಗರ: ಹಳೆಯ ಸಾರಿಗೆ ಬಸ್‌ಗಳನ್ನು ಪುನಶ್ಚೇತನಗೊಳಿಸಿ ಹೊಸ ವಾಹನಗಳಾಗಿ ಪರಿವರ್ತಿಸಿದ ಕೆಎಸ್‌ಆರ್‌ಟಿಸಿ ಚಾಮರಾಜನಗರ ವಿಭಾಗಕ್ಕೆ ನಗದು ಬಹುಮಾನ ಹಾಗೂ ಪ್ರಶಂಸೆ ಲಭಿಸಿದೆ.

ಚಾಮರಾಜನಗರ ಕೆಎಸ್‌ಆರ್‌ಟಿಸಿ ವಿಭಾಗದಲ್ಲಿ ಸುಮಾರು 9-10 ಲಕ್ಷಕ್ಕೂ ಹೆಚ್ಚು ಕಿ.ಮೀ. ಕ್ರಮಿಸಿದ ಹಳೆಯ ಸಾಮಾನ್ಯ ವಾಹನಗಳನ್ನು ಪುನಶ್ಚೇತನಗೊಳಿಸಿ, ಕಡಿಮೆ ವೆಚ್ಚದಲ್ಲಿ ಮುಂಬಾಗಿಲು ಇರುವ ಹೊಸ ವಾಹನಗಳಾಗಿ ಪರಿವರ್ತಿಸಲಾಗಿದೆ. ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಚಾಮರಾಜನಗರ ವಿಭಾಗದ ತಾಂತ್ರಿಕ ಸಿಬ್ಬಂದಿ ಪರಿಶ್ರಮ ಮತ್ತು ಕಾರ್ಯಕ್ಷಮತೆಯನ್ನು ಮೆಚ್ಚಿ 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಂಸೆ ಪತ್ರ ನೀಡಿ ಗೌರವಿಸಲಾಗಿದೆ.

ಬೆಂಗಳೂರಿನಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಕೆಎಸ್‌ಆರ್‌ಟಿಸಿ ಚಾ.ನಗರ ವಿಭಾಗದ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್ ಹಾಗೂ ತಾಂತ್ರಿಕ ಸಿಬ್ಬಂದಿಗೆ ಪ್ರಶಂಸೆಯ ಪತ್ರವನ್ನು ನೀಡಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net