

ಚಾಮರಾಜನಗರ: ಜಿಲ್ಲೆಯಲ್ಲಿ ಬುಡಕಟ್ಟು ಜನರ ಉತ್ತಮ ಬದುಕಿಗಾಗಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಸರ್ಕಾರ ಈ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲನಿ ನಿವಾಸಿ ಡಾ.ಎಸ್.ರತ್ನಮ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಧಕಿ. ಇವರು ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ಹೋರಾಟ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ ಸಮುದಾಯದ ಮನವೊಲಿಸಿ ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ದಾಖಲಿಸುವುದು, ಸಮುದಾಯದ ಶಿಕ್ಷಣಕ್ಕೆ ಪೂರಕವಾದ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಹಾಗೂ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ. ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವುದು, ಸಮುದಾಯದ ಕಲೆ, ಕುಲ ಸಂಸ್ಕೃತಿಯ ಸಂರಕ್ಷಿಸುವುದು, ಕಸುಬನ್ನು ಪೋಷಿಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಇವರ ಅನುಪಮ ಸೇವೆಯನ್ನು ಗುರುತಿಸಿ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.