

ಚಾಮರಾಜನಗರ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಯುವ ಶಕ್ತಿ ಪರಿಷತ್ ವತಿಯಿಂದ ನಗರದ ಪಿಡಬ್ಲೂೃಡಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಸಿಹಿಯನ್ನು ವಿತರಣೆ ಮಾಡಲಾಯಿತು.
ಇದೇ ವೇಳೆ ಯುವ ಶಕ್ತಿ ಪರಿಷತ್ ಅಧ್ಯಕ್ಷ ಎಲ್. ಸುರೇಶ್ ಮಾತನಾಡಿ, ರಾಜ್ಯ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಒಬ್ಬರು. ತಮ್ಮ ಸುಧೀರ್ಘ ರಾಜ್ಯ ರಾಜಕಾರಣದಲ್ಲಿ ಹೆಚ್ಚು ಬಾರಿ ಗೆಲುವು ಸಾಧಿಸಿ, ಅನೇಕ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದರು. ವಿರೋಧ ಪಕ್ಷದ ನಾಯಕರಾಗಿ ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡಿದ್ದರು ಎಂದರು.
ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್‌ನ ನಿರ್ದೇಶಕ ನಾಗೇಂದ್ರ, ಮುಖ್ಯ ಶಿಕ್ಷಕಿ ಮಾಲಿನಿ, ಸಹಶಿಕ್ಷಕರು ಹಾಗೂ ಪ್ರಶಿಕ್ಷಕಣಾರ್ಥಿಗಳು, ಪರಿಷತ್‌ನ ಸದಸ್ಯರು ಉಪಸ್ಥಿತಿರಿದ್ದರು.