ಮಾವನ ಹಕ್ಕುಗಳ ಅರಿವು ಅವಶ್ಯಕ

21raju4
Published on

ಚಾಮರಾಜನಗರ: ಮಾನವ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಕುದೇರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ತಾಜುದ್ದೀನ್ ಹೇಳಿದರು.

ತಾಲೂಕಿನ ತೆಂಕಲಮೋಳೆಯಲ್ಲಿ ದಕ್ಷಿಣ ಭಾರತ ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂರಕ್ಷಣಾ ಘಟಕ ಸಿಕ್ರಂ ಸಂಸ್ಥೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾನವ ಹಕ್ಕುಗಳು ಮತ್ತು ಕಾನೂನು ಸಲಹಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ವಿದ್ಯಾವಂತರಾದಾಗ ಅಪರಾಧ ಪ್ರಕರಣ ಕಡಿಮೆಯಾಗುತ್ತದೆ. ಮಾನವಹಕ್ಕುಗಳು ವ್ಯಕ್ತಿಯ ಸ್ವಾತಂತ್ರ್ಯ ಸಮಾನತೆ, ಗೌರವ, ಘನತೆಗೆ ಸಂಬಅಧಿಸಿದೆ. ಪ್ರತಿಯೊಬ್ಬರೂ ಸ್ವತಂತ್ರವಾಗಿ ಜೀವಿಸಲು ಮಾನವಹಕ್ಕುಗಳು ರಕ್ಷಣೆ ನೀಡುತ್ತದೆ. ಈ ನಿಟ್ಟಿನಲ್ಲಿ ಸಿಕ್ರಂ ಸಂಸ್ಥೆಯು ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವುದು ತುಂಬಾ ಸಂತಸವಾಗಿದೆ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.

ವಕೀಲ ಮಂಜುನಾಥ್, ಎಂ.ಮಹೇಶ್ ಕಾನೂನು ಅರಿವು ಮೂಡಿಸಿದರು. ಗ್ರಾಪಂ ಅಧ್ಯಕ್ಷೆ ಸವಿತಾ, ಸದಸ್ಯೆ ಪುಟ್ಟತಾಯಮ್ಮ, ಮಾಜಿ ನಾಗಸುಂದರಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ, ರಮ್ಯಾ, ರಂಗಶೆಟ್ಟಿ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net