ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

782c923d-f211-40a9-8256-30bbb99b881f
Published on

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೊಳ್ಳೇಗಾಲದ ಕುಂತೂರು ಸಕ್ಕರೆ ಕಾರ್ಖಾನೆ ಮತ್ತು ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ ಬೆಲೆ ನಿಗದಿ ಮಾಡಿರುವಂತೆ ಹಣ ನೀಡಬೇಕೆಂದು ಆಗ್ರಹಿಸಿದರು.

ರೈತರ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಬಣ್ಣಾರಿ ಸಕ್ಕರೆ ಕಾರ್ಖಾನೆಯೊಂದಿಗೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕು. ರಾಜ್ಯಸರ್ಕಾರ ಕಬ್ಬು ಬೆಳೆಗಾರರ ಸಂಘದ ಹೋರಾಟದ ಲವಾಗಿ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 150 ರೂ. ನಿಗದಿ ಮಾಡಿದ್ದು, ಇದನ್ನು ತಕ್ಷಣ ರೈತರಿಗೆ ಪಾವತಿ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಹಾಲಿನ ನಾಗರಾಜು, ಕಿರಗಸೂರು ಶಂಕರ್, ಕುರುಬೂರು ಸಿದ್ದೇಶ್, ಶಿವಕುಮಾರ್, ಸೋಮಶೇಖರ್, ಮಹದೇವಸ್ವಾಮಿ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net