

ಚಾಮರಾಜನಗರ: ವಿಧಾನಸಭೆಯಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲೆಯಲ್ಲೂ ಮಾಜಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸ್ಪೀಕರ್ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಲ್ಲಿಂದ ಶ್ರೀಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ಮೂಲಕ ಸಾಗಿ ಕೆಲಕಾಲ ರಸ್ತೆ ತಡೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿಶಾಸಕ ಎನ್.ಮಹೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಕಾನೂನು ಬಾಹಿರವಾಗಿ, ಸಂವಿಧಾನ ವಿರೋಧಿಯಾಗಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿದೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾಗ ಸದನದ ಒಳಗೆ ಪ್ರತಿಭಟನೆ ಮಾಡಿ, ತೊಡೆತಟ್ಟಿ ವಿಧಾನಸೌಧದ ಬಾಗಿಲನ್ನು ಒದ್ದಿ ರೌಡಿಸಂ ತರಹ ವರ್ತಿಸಿದ್ದರು. ಈಗ ಬಿಜೆಪಿ ಶಾಸಕರನ್ನು ಹೊರಗಿಟ್ಟು ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳುತ್ತಿದ್ದಾರೆ. ್ಯೂಡಲ್ ಲಾರ್ಡ್ ತರಹ ನಡೆದುಕೊಳ್ಳುತ್ತಿದ್ದಾರೆ ಇದು ಅತ್ಯಂತ ಖಂಡನೀಯ ಎಂದು ಸಿದ್ದರಾಮಯ್ಯನವರ ವಿರುದ್ಧ ಹರಿಹಾಯ್ದರು.
ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರತಿಭಟನೆ ಮಾಡಿದರೆ, ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟಿಸಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಅವರಿಗೆ ನಾಚಿಕೆ ಆಗಬೇಕು, ಇದು ಅಧಿಕ ಪ್ರಸಂಗದ ಪರಮಾವಧಿಯಾಗಿದೆ. ಕಾಂಗ್ರೆಸ್ ಸರ್ಕಾರ ೋಷಣೆ ಮಾಡಿದ ಗ್ಯಾರೆಂಟಿಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಿ ಅಂದರೆ, ನಮ್ಮನ್ನು ಜನವಿರೋಧಿಗಳು ಎಂದು ಬಿಂಬಿಸುತ್ತಾರೆ. 5 ಜನ ಉಗ್ರರನ್ನು ಬಂಧಿಸಿದ್ದಾರೆ, ಅವರೇನು ಹೂವು ಮಾರಾಟ ಮಾಡುವವರೆ. ಅವರೆಲ್ಲರೂ ಭಯೋತ್ಪಾದಕರು ಅದನ್ನು ಮುಚ್ಚಿಡುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿಶಾಸಕ ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ಬಿಜೆಪಿ ಶಾಸಕರನ್ನು ಅಮಾನತು ಮಾಡುವ ಮೂಲಕ ಕಾಂಗ್ರೆಸ್ ವಿಧಾನಸೌಧದಲ್ಲಿ ಗೂಂಡಾ ವರ್ತನೆ ಮಾಡಲು ಶುರುಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ಕೋಮುಗಲಭೆ, ಕೊಲೆ, ರೈತರ ಆತ್ಮಹತ್ಯೆ ಶುರುವಾಗಿದೆ. ಗ್ಯಾರೆಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಬಡ ಜನರನ್ನು ಈ ಮೂಲಕ ವಂಚಿಸುತ್ತಿದೆ. ಕಾಂಗ್ರೆಸ್ ಬಡವರ ಹಾಗೂ ರೈತರ ವಿರೋಧಿಯಾಗಿದೆ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರು, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಆರ್.ಸುಂದರ್, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಡಾ.ಎ.ಆರ್.ಬಾಬು, ನೂರೊಂದು ಶೆಟ್ಟಿ, ಮೂಡ್ನಕೂಡು ಪ್ರಕಾಶ್, ನಟರಾಜು, ಸೂರ್ಯಕುಮಾರ್, ಆನಂದ್ ಭಗೀರಥ, ಶಿವು ವಿರಾಟ್, ಮಂಜುನಾಥ್, ಶಿವಕುಮಾರ್ ಹಾಗೂ ಇತರರು ಭಾಗವಹಿಸಿದ್ದರು.