ಮಣಿಪುರದ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Kodasalli-dam-gate-open
Published on

ಚಾಮರಾಜನಗರ: ಮಣಿಪುರ ರಾಜ್ಯದಲ್ಲಿ ನಡೆದಿರುವ ಮಹಿಳೆಯರ ದೌರ್ಜನ್ಯವನ್ನು ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಡಿವಿಯೇಷನ್ ರಸ್ತೆಯಲ್ಲಿರುವ ಲಾರಿ ನಿಲ್ದಾಣದ ಬಳಿ ಜಮಾಯಿಸಿದ ಮುಸ್ಲಿಂ ಮಹಿಳೆಯರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷೆ ರೇಷ್ಮಾಬಾನು ಮಾತನಾಡಿ, ಮಣಿಪುರದಲ್ಲಿ ಕಳೆದ ತಿಂಗಳಿಂದ ಗಲಭೆಗಳು ನಡೆಯುತ್ತಿದ್ದು, ನೂರಾರು ಜನರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲೂ ಮಹಿಳೆಯರು ಹೆಚ್ಚು ದೌರ್ಜನ್ಯಕ್ಕೊಳಪಡುತ್ತಿದ್ದಾರೆ. ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ನಡೆಸಿ, ಲೈಂಗಿಕ ಕಿರುಕುಳ ನೀಡಿ, ಸಾಮೂಹಿಕ ಅತ್ಯಾಚಾರಗೈದಿರುವ ಘಟನೆಯು ಅತ್ಯಂತ ಘೋರ ಕೃತ್ಯವಾಗಿದೆ. ಸಂತ್ರಸ್ತೆಯೋರ್ವಳು ಕಾರ್ಗಿಲ್ ಯೋಧನ ಪತ್ನಿಯಾಗಿದ್ದು, ಪ್ರಕರಣದ ಗಂಭೀರತೆಯನ್ನು ಇನ್ನಷ್ಟು ಹೆಚ್ಚಿಸಿದೆ. ಇದು ಸರ್ಕಾರಿ ಪ್ರಾಯೋಗಿಕ ಹತ್ಯಾಕಾಂಡವಾಗಿದೆ ಎಂದು ಆರೋಪಿಸಿದರು.

ಈ ಘಟನೆಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮವನ್ನು ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಬೇಕು. ಇಡೀ ಮಣಿಪುರದ ಹತ್ಯಾಕಾಂಡವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ವಹೀದ ಖಾನಂ, ಪ್ರಧಾನ ಕಾರ್ಯದರ್ಶಿ ರಾಮಾನಾ ತಾಜ್, ಖಜಾಂಚಿ ಶಬನಾ ಬೇಗಂ, ಕಾರ್ಯದರ್ಶಿ ಶೌಜೀಯಾ ಬಾನು, ತೌಸಿಯಾ ಇಸ್ರಾರ್, ಆಯಿಷಾ ಹುದಾ, ಶೃತಿ ಪ್ರಕಾಶ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net