ಜು.31 ರಂದು ವಿವಿಧ ಸೇವಾಕಾರ್ಯಕ್ರಮ

27raju5
Published on

ಚಾಮರಾಜನಗರ: ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ್ 62ನೇ ಹುಟ್ಟುಹಬ್ಬದ ಅಂಗವಾಗಿ ಜು.31 ರಂದು ವಿವಿಧ ಸೇವಾಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಮಾಹಿತಿ ನೀಡಿದರು.

ನಗರದ ರೋಟರಿ ಭವನದಲ್ಲಿ ಜು.31 ರ ಸೋಮವಾರ ಬೆಳಿಗ್ಗೆ 10 ರಿಂದ ಮಧ್ಯಹ್ನ 12 ಗಂಟೆ ವರಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಯಳಂದೂರಿನ ಬಿಳಿಗಿರಿರಂಗನ ಬೆಟ್ಟದ ಶಾಲಾ ಮಕ್ಕಳಿಗೆ ಶಾಲಾಬ್ಯಾಗ್, ಸ್ಪೆಟರ್ ವಿತರಣೆ ಹಾಗೂ ಕೊಳ್ಳೇಗಾಲದಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಆರ್.ಧ್ರುನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಪ್ರತಿವರ್ಷವೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಾ ಬರಲಾಗುತ್ತಿದೆ. ಈ ಮೂಲಕ ಧ್ರುವನಾರಾಯಣ್ ಆದರ್ಶಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಕಳೆದ 11 ವರ್ಷಗಳಿಂದ ಅಭಿಮಾನಿಬಳಗದ ವತಿಯಿಂದ ರಕ್ತದಾನ ಶಿಬಿರ, ಸಾಮೂಹಿಕ ವಿವಾಹ, ಉದ್ಯೋಗ ಮೇಳ, ಆಯುಷ್ಮಾನ್ ಕಾರ್ಡ್, ಮಾಸ್ಕ್ ವಿತರಣೆ, ಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಪುಸ್ತಕ ವಿತರಣೆ ಹಾಗೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದೇವೆ. ಈ ಮೂಲಕ ದಿ.ಆರ್,ಧ್ರುವನಾರಾಯಣ್ ಸರಳ, ಸಜ್ಜನಿಕೆಯ ನಡೆಯನ್ನು ಜನರಿಗೆ ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಅಭಿಮಾನಿ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು, ಜಿಲ್ಲಾ ಪಂ. ಮಾಜಿ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಕನಿಷ್ಠ ವೇತನ ಸಲಹಾ ಸಮಿತಿ ಮಂಡಳಿ ಮಾಜಿ ಅಧ್ಯಕ್ಷ ಉಮೇಶ್, ಚಿಕ್ಕಮಹದೇವು, ಎಲ್‌ಐಸಿ ನಾಗನಾಯಕ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net