ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

10chn1
Published on

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲೂಕು ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಸದಸ್ಯರು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಬಿಇಒ ಸೋಮಣ್ಣೇಗೌಡ ಅವರಿಗೆ ಸಂಘದ ಅಧ್ಯಕ್ಷ ಲಾಲಿಂಗಸ್ವಾಮಿ ಮನವಿ ಸಲ್ಲಿಸಿದರು.
ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮ 2017, ತಿದ್ದುಪಡಿ ನಿಯಮ-2021ರಲ್ಲಿ ಆಗಿರುವ ಸಾಮಾಜಿಕ ತಾರತಮ್ಯ ಹಾಗೂ ಅನ್ಯಾಯಗಳನ್ನು ಸರಿಪಡಿಸಬೇಕು. ಸೇವಾನಿರತ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಬಡ್ತಿ ಮತ್ತು ವರ್ಗಾವಣೆಯಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಹೋಗಲಾಡಿಸಲು 2017ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧ್ಯಕ್ಷ ಕೆ.ಎಸ್.ಮಾದಪ್ಪ, ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಭರತ್‌ಭೂಷಣ್, ಉಪಾಧ್ಯಕ್ಷ ಟಿ.ಕೆ.ರಾಮಸ್ವಾಮಿ, ಮುರುಗೇಶ್‌ಕುಮಾರ್, ಎಸ್.ಡಿ.ರಾಜು, ಗೌರವಾಧ್ಯಕ್ಷ ಎಂ.ಡಿ.ಮಹದೇವಯ್ಯ, ಖಜಾಂಚಿ ಕೃಷ್ಣಮೂರ್ತಿ, ಆ.ಪು. ಮಹದೇವಸ್ವಾಮಿ, ಸಹ ಕಾರ್ಯದರ್ಶಿಗಳಾದ ಸಮಿವುಲ್ಲಾ, ಧನಂಜಯ, ಕೆಂಪರಾಜು, ಸವಿತ ರಾಣಿ, ಸುಧಾ, ಶಶಿಕಲಾ, ಗೀತಾ, ಮಂಜುಳಾ, ಮಲ್ಲಿಕಾರ್ಜುನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net