ಸಮಿತಿಗಳಿಗೆ ಶಾಸಕರ ನೇಮಕ

congrss-chamarajanagara-c.s.puttaramgasheety
Published on

ಚಾಮರಾಜನಗರ: ವಿಧಾನಮಂಡಲ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಜಿಲ್ಲೆಯ ನಾಲ್ಕು ಶಾಸಕರನ್ನು ಸರ್ಕಾರ ನೇಮಕ ಮಾಡಿದೆ.

ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಸಾರ್ವಜನಿಕ ಉದ್ದಿಮೆಗಳ ಸಮಿತಿ ಮತ್ತು ಹಕ್ಕು ಬಾಧ್ಯತೆಗಳ ಸಮಿತಿ ಸದಸ್ಯ, ಗುಂಡ್ಲುಪೇಟೆಯ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್‌ಗೆ ಮಹಿಳಾ ಮತ್ತು ಮಕ್ಕಳ ಸಮಿತಿ ಸದಸ್ಯರ, ಹನೂರಿನ ಶಾಸಕ ಎಂ.ಆರ್.ಮಂಜುನಾಥ್ ಅವರನ್ನು ಸಭೆಯ ಮುಂದಿಡುವ ಕಾಗದ ಪತ್ರಗಳ ಸಮಿತಿ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net