

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಗುಂಡ್ಲುಪೇಟೆ ಪಟ್ಟಣದಲ್ಲಿ 277 ಫಲಾನುಭವಿಗಳು, ಕಸಬಾ ಹೋಬಳಿ 424, ಬೇಗೂರು 265, ಹಂಗಳ 340, ತೆರಕಣಾಂಬಿ 508 ಫಲಾನುಭವಿಗಳು ಆಧಾರ್ ಲಿಂಕ್ ಮಾಡಿಸಲು ಬಾಕಿ ಇದ್ದು ಬ್ಯಾಂಕ್, ಅಂಚೆ ಕಚೇರಿಯ ಉಳಿತಾಯ ಖಾತೆಗೆ ಆಧಾರ್ ಸಂಖ್ಯೆಯನ್ನು ಆ.20ರೊಳಗೆ ಲಿಂಕ್ ಮಾಡಿಸುವಂತೆ ತಹಸೀಲ್ದಾರ್ ತಿಳಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ಮೈತ್ರಿ ಹಾಗೂ ಮನಸ್ವಿನಿ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನೇರಹಣ ವರ್ಗಾವಣೆ ಮೂಲಕ ಭಾರತೀಯ ರಾಷ್ಟ್ರೀಯ ಪಾವತಿ ನಿಗಮದ ಮೂಲಕ ಆಧಾರ್ ಆಧಾರಿತ ಪಿಂಚಣಿ ಪಾವತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆಧಾರ್ ಲಿಂಕ್ ಮಾಡಿಸಲು ಸೂಚಿಸಿದ್ದರೂ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಟ್ಟು 1814 ಫಲಾನುಭವಿಗಳು ಎನ್‌ಪಿಸಿಐ ಪೋರ್ಟ್‌ಲ್‌ನಲ್ಲಿ ಆಧಾರ್ ಸೀಡಿಂಗ್ ಮಾಡಲು ಬಾಕಿ ಉಳಿದಿರುತ್ತವೆ. ಫಲಾನುಭವಿಗಳು ಅಂಚೆ ಕಚೇರಿಯ ಉಳಿತಾಯ ಖಾತೆಗೆ ಆಧಾರ್ ಸಂಖ್ಯೆಯನ್ನು ಆ.20 ರೊಳಗೆ ಲಿಂಕ್ ಮಾಡಿಸುವಂತೆ ಗುಂಡ್ಲುಪೇಟೆ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.