

ಚಾಮರಾಜನಗರ: ತಾಲೂಕಿನ ಕಾಳನಹುಂಡಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ನಂಜೇದೇವನಪುರ ಗ್ರಾ.ಪಂ. ಅಧ್ಯಕ್ಷ ಪಿ.ಶೇಖರಪ್ಪ ಧ್ವಜಾರೋಹಣದ ನಂತರ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ್ಯ ದಿನವನ್ನು ಸಂಭ್ರಮ, ಸಡಗರದಿಂದ ಆಚರಿಸುತ್ತಿದ್ದೇವೆ. ನಮ್ಮ ಹಿರಿಯರು ನಮಗೆ ಗಳಿಸಿಕೊಟ್ಟ ಸ್ವಾತಂತ್ರ್ಯ ವನ್ನು ಉಳಿಸಿಕೊಂಡು ಹೋಗುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಇದೇ ವೇಳೆ ನಿವೃತ್ತ ಶಿಕ್ಷಕರಾದ ಸಿದ್ದಪ್ಪ, ಪಿಎಸಿಸಿ ಅಧ್ಯಕ್ಷ ನಾಗರಾಜಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರಪ್ಪ, ಕಾಳನಹುಂಡಿ ಬಸವಣ್ಣ ಹಾಗೂ ಕಾಳನಹುಂಡಿ ಪುಟ್ಟಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮದ ಬಳಿಕ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಪತ್ರಕರ್ತ ಜಯಶಂಕರ್ ಬದನಗುಪ್ಪೆ, ಎಸ್‌ಡಿಎಂಸಿ ಅಧ್ಯಕ್ಷ ಚಿನ್ನಸ್ವಾಮಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಟೇಲ್ ಗುರುಮಲ್ಲಪ್ಪ, ಸದಸ್ಯರಾದ ಮಹದೇವಸ್ವಾಮಿ, ಮುಖ್ಯಶಿಕ್ಷಕ ಬಸವಣ್ಣ, ಶಿಕ್ಷಕರಾದ ಎಂ.ದೀಪಿಕಾ, ಎಸ್.ಎಂ.ನಂಜುಂಡಸ್ವಾಮಿ ಇತರರು ಹಾಜರಿದ್ದರು.