ಮದ್ಯ ಸಂಗ್ರಹಿಸಿದ್ದ ನಾಲ್ವರ ಬಂಧನ

13raju1
Published on

ಚಾಮರಾಜನಗರ : ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯ ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.
ತಾಲೂಕು ಬಡಗಲಪುರ ಗ್ರಾಮದ ವೀರಭದ್ರಸ್ವಾಮಿ ಮನೆ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟುಕೊಂಡಿದ್ದ 4,882 ರೂ. ಮೌಲ್ಯದ 12.510 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.


ನಲ್ಲೂರು ಗ್ರಾಮದ ಸುಬ್ಬಯ್ಯ ಮನೆ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿದ್ದ 1756 ರೂ. ಮೌಲ್ಯದ 4.500 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹನೂರು ತಾಲೂಕು ಅಜ್ಜೀಪುರ ಗ್ರಾಮದಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3372 ರೂ. ಮೌಲ್ಯದ 8.640 ಲೀಟರ್ ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಆರೋಪಿಯನ್ನು ಬಂಧಿಸಿ ಮೊಕದ್ದಮೆ ದಾಖಲಿಸಲಾಗಿದೆ. ವಾಹನ ವಶಕ್ಕೆ ಪಡೆಯಲಾಗಿದೆ.


ಹನೂರು ತಾಲೂಕಿನ ಕೆ. ಗುಂಡಾಪುರ-ಕಾಂಚಹಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1686 ರೂ. ಮೌಲ್ಯದ 4.320 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ವಾಹನ ವಶಕ್ಕೆ ಪಡೆಯಲಾಗಿದೆ.
ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು ಹಾಗೂ ಚಾಮರಾಜನಗರ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ ಮತ್ತು ಚಾಮರಾಜನಗರ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಎಂ.ಡಿ. ಮೋಹನ್ ಕುಮಾರ್ ಮಾರ್ಗದರ್ಶನದಂತೆ ದಾಳಿ ನಡೆಸಲಾಯಿತು. ಅಬಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ಎಂ.ಬಿ.ಉಮಾಶಂಕರ, ಬಿ.ಪಿ. ನಂದಿನಿ, ಬಿ. ರವಿಕುಮಾರ್, ಬಿ.ವಿ. ಕೃಷ್ಣಮೂರ್ತಿ, ಆರ್. ವೀರತಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net