ಹಿಂದುಳಿದ ವರ್ಗಗಳಿಗೆ ಅಪಾರ ಕೊಡುಗೆ

21chn2
Published on

ಚಾಮರಾಜನಗರ: ಬಡವರು, ಹಿಂದುಳಿದವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ತಿಳಿಸಿದರು.

ನಗರದ ಸೋಮಣ್ಣ ಲೇಔಟ್‌ನಲ್ಲಿರುವ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ಹಾವನೂರು ಆಯೋಗ ರಚನೆ ಮಾಡಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಟ್ಟರು. ಸಾಮಾಜಿಕ ನ್ಯಾಯ ಪರವಾಗಿದ್ದರ. ಅವರನ್ನು ಸ್ಮರಿಸಿಕೊಳ್ಳುವುದು ನೆಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಡಿ.ದೇವರಾಜ ಅರಸು ಜಾರಿಗೆ ತಂದ ಭೂ ಸುಧಾರಣೆ ಕಾಯ್ದೆಯ ಪರಿಣಾಮದಿಂದ ರೈತರು, ಕೂಲಿಕಾರರು ಭೂಮಿ ಮಾಲೀಕರಾದರು. ರಾಜ್ಯದ ಹಿಂದುಳಿದ ವರ್ಗದವರಿಗೆ ಅರಸು ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದರು. ನಗರಸಭಾ ಸದಸ್ಯ ರಾಮಸಮದ್ರ ಸುರೇಶ್, ಶಿವಸ್ವಾಮಿ, ರಾಜು, ವೇಣುಗೋಪಾಲ್, ಶಿವು, ಲಿಂಗರಾಜು, ಮಹದೇವನಾಯಕ, ರಾಜು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net