ಬಿಜೆಪಿ ಕಾರ್ಯಕರ್ತರ ಸಂಭ್ರಮ

IMG-20230823-WA0219
Published on

ಗುಂಡ್ಲುಪೇಟೆ: ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವಿಕ್ರಂ ಲ್ಯಾಂಡರ್ ಚಂದ್ರನಲ್ಲಿ ಇಳಿಯುತ್ತಿದ್ದಂತೆ ಎಂಡಿಸಿಸಿ ಬ್ಯಾಂಕ್ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ವೇಳೆ
ನಟ ಪ್ರಕಾಶ್ ರಾಜ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ಗ್ರಾಪಂ ಸದಸ್ಯ ನಂದೀಶ್, ಮಂಜು, ಮಂಜುನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net