ದೇವಸ್ಥಾನಗಳಿಗೆ ಭೇಟಿ ನೀಡಿದರೆ ಮನಸ್ಸಿಗೆ ನೆಮ್ಮದಿ

25chn1
Published on

ಚಾಮರಾಜನಗರ : ದೇವಸ್ಥಾನಗಳಿಗೆ ಭೇಟಿ ನೀಡುವುದರಿಂದ ಮನಸ್ಸಿಗೆ ನೆಮ್ಮದಿ ಹಾಗೂ ಶಾಂತಿ ದೊರೆಯುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಹುಡೇದಾ ತಿಳಿಸಿದರು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಗೃಹಿಣಿಯರಿಗೆ ಅರಿಶಿಣ, ಕುಂಕುಮ ಹಾಗೂ ಸೀರೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದವರು. ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಬರುವ ಭಕ್ತಾದಿಗಳಿಗೆ ಅರಿಶಿಣ, ಕುಂಕುಮ ನೀಡುವಂತೆ ಆದೇಶಿಸಿದೆ. ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಕುಟುಂಬ ಸಮೇತ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ವರಮಹಾಲಕ್ಷ್ಮೀ ಸೇವಾ ಸಂಸ್ಥೆಯಿಂದ ಗೃಹಿಣಿಯರಿಗೆ ಸೀರೆ, ಬ್ಲೌಸ್‌ಪೀಸ್ ಹಾಗೂ ಬಳೆ ವಿತರಣೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ಮಾತನಾಡಿ, ಪಾಲಕರು ಮಕ್ಕಳಿಗೆ ವಿದ್ಯಾಭ್ಯಾಸದ ಜತೆಗೆ, ಭಾರತೀಯ ಸಂಸ್ಕೃತಿ ಬಿಂಬಿಸುವ ಆಚರಣೆಗಳ ಬಗ್ಗೆ ತಿಳಿಸಿಕೊಡಬೇಕು ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷ ಜಿ.ಬಂಗಾರು, ನಗರಸಭೆ ಆಯುಕ್ತ ರಾಮದಾಸ್, ಇನ್ನರ್ ವ್ಹೀಲ್ ಸಂಸ್ಥೆ ಮಾಜಿ ಅಧ್ಯಕ್ಷೆ ಲಕ್ಷ್ಮೀ ಶಿವಕುಮಾರ್, ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮಹೇಶ್, ಅರ್ಚಕ ರಾಮಕೃಷ್ಣ ಭಾರದ್ವಾಜ್, ದರ್ಶನ್, ಅನಿಲ್, ಕುಮಾರ್, ವೇದಿಕೆ ಪ್ರಧಾನ ಕಾರ್ಯದರ್ಶಿ ಬಿ.ಮಾದಲಾಂಬಿಕೆ, ನಿರ್ದೇಶಕಿ ನಾಗಲಕ್ಷ್ಮೀ , ಯಮುನಾ, ಶಿಲ್ಪಾ, ಶ್ವೇತಾ, ಕವಿತಾ, ಜ್ಯೋತಿ, ಎಸ್.ಪಿ.ಬಾಲಸುಬ್ರಮಣ್ಯಂ ಗಾನಗಂಧರ್ವ ಅಧ್ಯಕ್ಷ ಶಿವು, ಮಹೇಶ್, ಚೇತನ್, ಸಂತೋಷ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net