

ಚಾಮರಾಜನಗರ: ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನ ಮಾಡುವುದರ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್.ಋಗ್ವೇದಿ ಸಲಹೆ ನೀಡಿದರು.
ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರ ಶಾಲೆಯಲ್ಲಿ ಯೂತ್ ಾರ್ ಸೇವಾ ಸಂಸ್ಥೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಬ್ಯಾಗ್ ವಿತರಿಸಿ ಮಾತನಾಡಿದರು. ದೇಶದಾದ್ಯಂತ ಯೂತ್ ಾರ್ ಸೇವಾ ಸಂಸ್ಥೆ ಅತ್ಯುತ್ತಮ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಶಿಕ್ಷಣ, ಆರೋಗ್ಯ, ಕ್ರೀಡೆ , ಸಮೂಹ ಚಿಂತನೆ ಹಾಗೂ ಪರಿಸರ ಸೇವೆಯ ಮನೋಭಾವನೆಯನ್ನು ಹೆಚ್ಚಿಸುವ ಕೆಲಸವನ್ನು ಮಾಡುತ್ತಿದೆ. ತಾಲೂಕಿನ ವೆಂಕಟಯ್ಯನ ಛತ್ರ, ಉತ್ತುವಳ್ಳಿ, ಶಿವಪುರ, ಮಾದಾಪುರ, ದೊಡ್ಡರಾಯಪೇಟೆ, ಪಣ್ಯದ ಹುಂಡಿ, ಸರ್ಕಾರಿ ಶಾಲೆಯ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಇನ್ನಿತರೆ ಉಪಯೋಗಿ ವಸ್ತುಗಳನ್ನು ವಿತರಿಸುತ್ತಿರುವುದು ಖುಷಿಯ ವಿಚಾರ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುವ ಕಡೆ ಗಮನಹರಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ವಿಶೇಷವಾಗಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣವನ್ನು ಹೆಚ್ಚು ಪಡೆಯಬೇಕು. ಶಾಲೆಯನ್ನು ಅರ್ಧಕ್ಕೆ ಮೊಟಕುಗೊಳಿಸದೆ ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಂಡು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬೇಕು. ಆ ಮೂಲಕ ಈಗ ನೀವು ಪಡೆಯುತ್ತಿರುವುದನ್ನು ಸಮಾಜಕ್ಕೆ ಹಿಂದಿರುಗಿಸುವ ಕೆಲಸವಾಗಬೇಕು. ವಿದ್ಯಾರ್ಥಿಗಳ ಕಲಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಬೆಂಗಳೂರಿನ ಟೆಕ್ಸಾಸ್ ಇನ್ಸ್‌ಟ್ರುಮೆಂಟ್ಸ್ ಸಂಸ್ಥೆಯ ಯಶ್ ಮಾತನಾಡಿ, ಗಡಿ ಭಾಗದ ಮಕ್ಕಳು ವಿಶೇಷವಾಗಿ ಬುದ್ಧಿವಂತರಾಗಿದ್ದು, ಉತ್ತಮ ಅವಕಾಶ ನೀಡಿದರೆ ಅವರ ಬದುಕು ಉತ್ತಮವಾಗುತ್ತದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಯೂತ್ ಫಾರ್ ಸೇವಾ ಸಂಸ್ಥೆಯ ಮೂಲಕ ಶಿಕ್ಷಣ, ಪರಿಸರ, ಕಂಪ್ಯೂಟರ್ ಶಿಕ್ಷಣ, ಕಲೆ ಮತ್ತು ಕೌಶಲ ತರಬೇತಿ ಮುಂತಾದ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಮಹದೇವ ನಾಯಕ, ಸಂಸ್ಥೆಯ ಜಿಲ್ಲಾ ಸಂಚಾಲಕ ವಿಷ್ಣು, ಕೆ.ವಿ.ರಾಜಣ್ಣ, ಚಿಕ್ಕರಾಜು, ಅಭಿಷೇಕ್, ಸಂತೋಷ್, ದರ್ಶನ್, ರಾಜು, ಪ್ರಜ್ವಲ್, ಅವಿನಾಶ್, ರಾಹುಲ್, ಸಾಯಿರಾಮ್, ವನಜಾ, ಮೋನಿಕಾ ಉಪಸ್ಥಿತರಿದ್ದರು.