ಸೆ. 6ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

04chn10
Published on

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.6ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಿದ್ದಯ್ಯನಪುರ, ಹೊಂಗಲವಾಡಿ, ಕೋಳಿಪಾಳ್ಯ, ಬಂಧಿಗೌಡನಹಳ್ಳಿ, ಅಟ್ಟುಗೂಳಿಪುರ ಹಾಗೂ ಕೊತ್ತಲವಾಡಿ, ಅರಕಲವಾಡಿ, ಯರಗನಹಳ್ಳಿ, ಸುವರ್ಣನಗರ, ಫ್ಯಾಕ್ಟರಿ, ಬಿಸಿಲವಾಡಿ, ಪುಣಜನೂರು, ಡೊಳ್ಳಿಪುರ, ಚನ್ನಪನಪುರ, ಅಮಚವಾಡಿ, ಮಾದಲವಾಡಿ ಮತ್ತು ಕಿಲಿಗೆರೆ, ಮಾದಲವಾಡಿ, ಉನಗುಂಬ, ಯರಗನಹಳ್ಳಿ, ಅಚ್ಚಟ್ಟಿಪುರ, ಯಾನಗಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣಕ್ಕೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net