ಮುಂದುವರಿದ ಪ್ರತಿಭಟನೆ

04chn3
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ನಗರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಸೋಮವಾರ ಐದನೇ ದಿನಕ್ಕೆ ಕಾಲಿಟ್ಟಿದೆ.

ನಗರದ ಶ್ರೀಚಾಮರಾಜೇಶ್ವರಿ ಉದ್ಯಾನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕುಡಿಕೆ ಹಿಡಿದು ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ಕುಡಿಕೆಯಲ್ಲಿ ತುಂಬಿದ್ದ ನೀರನ್ನು ಚೆಲ್ಲುವ ಮೂಲಕ ತಮಿಳುನಾಡು, ಕರ್ನಾಟಕ ಸರ್ಕಾರ, ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ಕ್ರಮವನ್ನು ವಿರೋಧಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಿವೆ.

ಸೋಮವಾರವೂ ಪ್ರತಿಭಟನೆ ಮಾಡುತ್ತಿದ್ದು, ಕಾವೇರಿ ನಿರ್ವಹಣಾ ಮಂಡಳಿ ಕನ್ನಡಿಗರ ಪಾಲಿಗೆ ಕುಡಿಕೆ ನೀರು ಕೊಟ್ಟು, ತಮಿಳುನಾಡಿಗೆ ಕ್ಯೂಸೆಕ್ ನೀರು ಬಿಡುವ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಅದಕ್ಕಾಗಿ ಕುಡಿಕೆ ನೀರು ಸುರಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.
ಕೂಡಲೇ ರಾಜ್ಯ ಸರ್ಕಾರ ತ.ನಾಡಿಗೆ ಕಾವೇರಿ ನೀರು ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳು ಹೋರಾಟ ತೀವ್ರಗೊಳಿಸಲಿವೆ ಎಂದು ಎಚ್ಚರಿಸಿದರು. ನಿಜಧ್ವನಿ ಗೋವಿಂದರಾಜು, ಗು.ಪುರುಷೋತ್ತಮ, ಮಹೇಶ್‌ಗೌಡ, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ಚಾ.ಹ.ರಾಮು, ಸಿದ್ದರಾಜು, ಸಾಗರ್ ರಾವತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net