ಗ್ರಾಮಾಂತರ ಶಾಲೆಗಳಿಗೆ ಮೂಲಸೌಲಭ್ಯ

06-GPT-2
Published on

ಗುಂಡ್ಲುಪೇಟೆ: ಗ್ರಾಮಾಂತರ ಪ್ರದೇಶಗಳ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಭರವಸೆ ನೀಡಿದರು.

ತಾಲೂಕಿನ ಪುತ್ತನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ 13 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರದ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಉತ್ತಮ ಭವಿಷ್ಯವಿದೆ. ಇಲ್ಲಿನ ಶಿಕ್ಷಕರು ತಮ್ಮ ಜೀವನದುದ್ದಕ್ಕೂ ಮಕ್ಕಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ರಾಜ್ಯ ಸರ್ಕಾರವು ಭರವಸೆಗಳ ಈಡೇರಿಕೆಗೆ ಹೆಚ್ಚಿನ ಅನುದಾನ ಬಳಕೆ ಮಾಡುತ್ತಿದ್ದರೂ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತರುವ ಜತೆಗೆ ಸ್ವಯಂಸೇವಾ ಸಂಸ್ಥೆಗಳು ಹಾಗೂ ದಾನಿಗಳ ನೆರವಿನಿಂದ ಸ್ಮಾರ್ಟ್ ಕ್ಲಾಸ್, ಗ್ರಂಥಾಲಯ ಮುಂತಾದ ಸವಲತ್ತುಗಳನ್ನು ಪೂರೈಸಲಾಗುವುದು ಎಂದು ಹೇಳಿದರು.

ಸಿಆರ್‌ಪಿ ಶಿವಯ್ಯ, ಮುಖ್ಯಶಿಕ್ಷಕ ದಿನೇಶ್, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಮುಖಂಡ ರಾಜಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net