ಡಿ.ಆರ್.ರಾಜು ಹೋರಾಟದ ಧ್ವನಿ

08chn20
Published on

ಚಾಮರಾಜನಗರ: ಪೌರ ಕಾರ್ಮಿಕ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಅವರನ್ನು ರಾಜ್ಯ ಸಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಬೇಕು ಎಂದು ಪೌರ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಆರ‌್ಮುಗಂ ಒತ್ತಾಯಿಸಿದರು.

ರಾಜ್ಯದಲ್ಲಿ ಆದಿದ್ರಾವಿಡ ಸಮುದಾಯ 5 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ಆದಿದ್ರಾವಿಡ ಮಾದಿಗ ಸಮಾಜಕ್ಕೆ ಇದುವರೆವಿಗೂ ಯಾವುದೇ ನಿಗಮ ಮಂಡಳಿ ಸ್ಥಾನಮಾನಗಳನ್ನು ನೀಡಿರುವುದಿಲ್ಲ. ಡಿ.ಆರ್.ರಾಜು ಸಮುದಾಯ ನಾಯಕರಾಗಿದ್ದು, ನಂಜನಗೂಡು ನಗರಸಭೆಯಲ್ಲಿ 3 ಬಾರಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕಳೆದ 30ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದಾರೆ. ರಾಜ್ಯ ಪೌರಕಾರ್ಮಿಕರ ಸಮಸ್ಯೆಗಳಿಗೆ ಹೋರಾಟದ ಮೂಲಕ ಸ್ಪಂದಿಸಿದ್ದಾರೆ. ಇವರನ್ನು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನಮ್ಮ ಮನವಿಯನ್ನು ಪರಿಗಣಿಸಿ ಡಿ.ಆರ್.ರಾಜು ಅವರನ್ನು ರಾಜ್ಯ ಸಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಗೋಷ್ಠಿಯಲ್ಲಿ ರಾಜ್ಯ ಪೌರಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಪಳನಿ, ಸಂಚಾಲಕ ಸುರೇಶ್ ಮಾಂಬಳ್ಳಿ, ತಾಲೂಕು ಅಧ್ಯಕ್ಷ ಮಹದೇವಯ್ಯ ಮೇಗಲಹುಂಡಿ, ಪಳನಿ ಕುಂತೂರು, ಪಿ.ಮಹೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net