

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಉಪವಿಭಾಗ ವ್ಯಾಪ್ತಿಯ ಕೆಐಎಡಿಬಿ ಫೀಡರ್ ಮತ್ತು ಎಂಜಿನಿಯರಿಂಗ್ ಕಾಲೇಜು ಫೀಡರ್ ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ಸೆ.10ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ, ಎಂಜಿನಿಯರಿಂಗ್ ಕಾಲೇಜು, ಬಸವರಾಜೇಂದ್ರ ಆಸ್ಪತ್ರೆ, ಬೇಡರಪುರ ಮತ್ತು ಬದನಗುಪ್ಪೆ ಕೈಗಾರಿಕಾ ಭಾಗಕ್ಕೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.