

ಚಾಮರಾಜನಗರ: ನಗರದ ಸೇವಾ ಭಾರತಿ ಶಿಕ್ಷಣ ಸಂಸ್ಥೆ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಭಾನುವಾರ ದೊಡ್ಡರಸನ ಕೊಳದಲ್ಲಿ ಶ್ರದ್ಧಾಭಕ್ತಿಯಿಂದ ವಿಸರ್ಜನೆ ಮಾಡಲಾಯಿತು.
ಇದಕ್ಕೂ ಮುನ್ನ ನಗರದ ಚೆನ್ನಿಪುರಮೋಳೆಯ ಸೇವಾ ಭಾರತಿ ಪಬ್ಲಿಕ್ ಶಾಲೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿ, ಶಂಕರಪುರದ ವಿಎಚ್‌ಪಿ ಕನ್ನಡ ಶಾಲೆಯಲ್ಲಿ ವಿಶ್ವ ಹಿಂದು ಪರಿಷತ್ತಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರತಿಷ್ಠಾಪಿಸಿದ್ದ 60 ಗಣೇಶ ಮೂರ್ತಿಗಳನ್ನು ಮೆರವಣಿಗೆಯೊಂದಿಗೆ ತರಲಾಯಿತು.
ಮೆರವಣಿಗೆಯ ಉದ್ದಕ್ಕೂ ವಿದ್ಯಾರ್ಥಿಗಳ ಸಾಂಸ್ಕೃತಿ ಕಲಾತಂಡಗಳು ನೃತ್ಯ ಮಾಡಿದವು. ಹುಲಿ ವೇಷ, ಡೊಳ್ಳು ಕುಣಿತ, ಕೋಲಾಟದ ತಂಡಗಳು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದವು. ಬಳಿಕ ದೊಡ್ಡರಸನ ಕೊಳದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು.
ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಾಸುದೇವರಾವ್, ಉಪಾಧ್ಯಕ್ಷ ಬಾಲಸುಬ್ರಹ್ಮಣ್ಯಂ, ಆಡಳಿತಾಧಿಕಾರಿ ರಮೇಶ್, ಖಜಾಂಚಿ ಮಂಜುನಾಥ್, ಆಡಳಿತ ಮಂಡಳಿ ಸದಸ್ಯರಾದ ಬಾಲಸುಬ್ರಹ್ಮಣ್ಯಂ, ವೆಂಕಟಾಗಪ್ಪಶೆಟ್ಟಿ, ಮುರುಗೇಂದ್ರ ಮತ್ತು ಇತರರು ಉಪಸ್ಥಿತರಿದ್ದರು.