

ಚಾಮರಾಜನಗರ : ಸುತ್ತೂರು ಮಹಾಸಂಸ್ಥಾನ ಮಠದ 23 ನೇ ಪೀಠಾಧ್ಯಕ್ಷರಾದ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 108ನೇ ಜಯಂತಿ ಮಹೋತ್ಸವದ ಅಂಗವಾಗಿ ಅ.2 ಮತ್ತು 3 ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮುಖಂಡ ಬಿ.ಕೆ.ರವಿಕುಮಾರ್ ತಿಳಿಸಿದರು.
ನಗರದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು, ವಿವಿಧ ಸಂಘ ಸಂಸ್ಥೆಗಳು ಹಾಗೂ ಅಪಾರ ಭಕ್ತವೃಂದದ ವತಿಯಿಂದ ಜೆಎಸ್‌ಎಸ್ ಕಾಲೇಜು ಆವರಣದಲ್ಲಿ ಅ.2 ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ, ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಉದ್ಘಾಟಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್, ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಡಾ.ಮಹೇಶ್, ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಸಮಿತಿ ಸದಸ್ಯೆ ಡಾ.ಸಿ.ಎನ್.ರೇಣುಕಾದೇವಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ರೋಟರಿ ಸಿಲ್ಕ್‌ಸಿಟಿ ಮಾಜಿ ಅಧ್ಯಕ್ಷ ದೊಡ್ಡರಾಯಪೇಟೆ ಗಿರೀಶ್ ಮಾತನಾಡಿ, ಅ.3 ರಂದು ಬೆಳಿಗ್ಗೆ 8.30 ಗಂಟೆಗೆ ಡಾ.ರಾಜೇಂದ್ರ ಶ್ರೀಗಳ ಭಾವಚಿತ್ರ ಮೆರವಣಿಗೆಗೆ ಹರವೆ ವಿರಕ್ತ ಮಠದ ಶ್ರೀಸರ್ಪಭೂಷಣಸ್ವಾಮಿ, ಮರಿಯಾಲ ಶ್ರೀ ಮುರುಘರಾಜೇಂದ್ರ ಮಠದ ಇಮ್ಮಡಿ ಮುರುಘರಾಜೇಂದ್ರ ಸ್ವಾಮಿ ಹಾಗೂ ಶ್ರೀ ಸಿದ್ಧಮಲ್ಲೇಶ್ವರ ವಿರಕ್ತಮಠದ ಚನ್ನಬಸವಸ್ವಾಮಿ ಸಮ್ಮುಖದಲ್ಲಿ ಚಾಲನೆ ದೊರೆಯಲಿದೆ. ಜೆಎಸ್‌ಎಸ್ ಸಂಸ್ಥೆಯ ಆವರಣದಿಂದ ಹೊರಡುವ ಮೆರವಣಿಗೆ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಸಾಗಿ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಮತ್ತೆ ಕಾಲೇಜು ಆವರಣಕ್ಕೆ ತಲುಪಲಿದೆ ಎಂದು ತಿಳಿಸಿದರು.
ಜೆಎಸ್‌ಎಸ್ ಕಾಲೇಜು ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಡಾ.ರಾಜೇಂದ್ರ ಶ್ರೀಗಳ 108ನೇ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ಕೇಂದ್ರದ ಕೃಷಿ ಮತ್ತು ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಕರಂದ್ಲಾಜೆ ಉದದ್ಘಾಟಿಸುವರು. ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಸಾನಿಧ್ಯವಹಿಸುವರು. ಪಶುಸಂಗೋಪನೆ, ರೇಷ್ಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಶ್ರೀನಿವಾಸ್ ಪ್ರಸಾದ್ ನಿವೃತ್ತಸೈನಿಕರಿಗೆ ಅಭಿನಂದನೆ ಸಲ್ಲಿಸುವರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಪ್ರಶಸ್ತಿ ಪತ್ರ ವಿತರಿಸುವರು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿ.ಸೋಮಶೇಖರ್ ನುಡಿನಮನ ಸಲ್ಲಿಸುವರು. ಶಾಸಕರಾದ ಎಚ್.ಎಂ.ಗಣೇಶ್‌ಪ್ರಸಾದ್, ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್ ಮುಖ್ಯಅತಿಥಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭಾ ಸದಸ್ಯೆ ಚಿನ್ನಮ್ಮ, ಮಹಮ್ಮದ್‌ಅಸ್ಗರ್ ಮುನ್ನಾ, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಜೆಎಸ್‌ಎಸ್ ಪದವಿ ಕಾಲೇಜು ಪ್ರಾಚಾರ್ಯರಾದ ಸಿದ್ದರಾಜು ಉಪಸ್ಥಿತರಿದ್ದರು.