

ಚಾಮರಾಜನಗರ: ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯನನ್ನು ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಅಲ್ಲಿಂದ ಬೈಕ್ ಮೂಲಕ ತೆರಳಿ ರೈಲ್ವೆ ನಿಲ್ದಾಣದ ಮುಂಭಾಗ ಕೇಂದ್ರ ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನ್ಯಾಯಾಧೀಕರಣ ಕರ್ನಾಟಕ ಪಾಲಿಗೆ ಮರಣಶಾಸನ ಬರೆದಿದ್ದು, ಅನ್ಯಾಯ ಮಾಡಿದೆ. ಕಾವೇರಿ ನಿರ್ವಹಣಾ ಪ್ರಾಧಿಕಾರ ಕರ್ನಾಟಕದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ತಮಿಳುನಾಡು ಸರ್ಕಾರದ ಏಜೆಂಟ್ ತರಹ ವರ್ತಿಸುತ್ತಿದೆ. ಆಗಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಮಹೇಶ್ ಗೌಡ, ಗು.ಪುರುಷೋತ್ತಮ್, ನಂಜುಂಡಸ್ವಾಮಿ, ಲಿಂಗರಾಜು, ಆಟೋ ನಾಗೇಶ್, ತಾಂಡವಮೂರ್ತಿ, ಆಟೋ ನಾಗೇಶ್ ಭಾಗವಹಿಸಿದ್ದರು.