ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ

03chn9
Published on

ಚಾಮರಾಜನಗರ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರ ಹಕ್ಕುಗಳನ್ನು ರಕ್ಷಣೆ ಮಾಡೋಣ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶೆ ಬಿ.ಎಸ್.ಭಾರತಿ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ, ಬಾಲಕಾರ್ಮಿಕರ ಯೋಜನಾ ಸೊಸೈಟಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಬಾಲ್ಯಾವಸ್ಥೆ ಮತ್ತು ಕಿಶೋರವಸ್ತೆ ಕಾರ್ಮಿಕ ಪದ್ಧತಿ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಲ್ಲಿ ಹರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿರುವ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು. ಶಿಕ್ಷಣವನ್ನು ಪಡೆದುಕೊಂಡ ಮಕ್ಕಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಾರೆ. ಆದರೆ ಸಾಕಷ್ಟು ಮಕ್ಕಳು ಕುಟುಂಬದ ಸಮಸ್ಯೆಗಳಿಂದಾಗಿ ಉದ್ಯೋಗಕ್ಕೆ ಹೋಗುತ್ತಾರೆ. ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಈ ಕುರಿತು ಹೆಚ್ಚಿನ ಅರಿವು ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಸಹಕಾರಿ ಎಂದರು.

ಈ ಸಂಧರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಎಂ.ಸವಿತಾ, ಹಿರಿಯ ಕಾರ್ಮಿಕ ನಿರೀಕ್ಷಕ ಜಿ.ಬಿ.ವೀಣಾ, ಮಹಿಳಾ ಠಾಣೆಯ ಪೊಲೀಸ್ ಅಧಿಕಾರಿ ನಾಗಮ್ಮ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ವಿರುಪಾಕ್ಷಸ್ವಾಮಿ, ಜಂಟಿ ಕಾರ್ಯದರ್ಶಿ ಮಲ್ಲು, ಸರ್ಕಾರಿ ಕಾನೂನು ಅಭಿರಕ್ಷಕ ಮಹಾಲಿಂಗ ಸ್ವಾಮಿ, ಸೌಮ್ಯ, ಯೋಜನಾ ನಿರ್ದೇಶಕ ಮಹೇಶ್, ಕಾರ್ಮಿಕ ಇಲಾಖೆಯ ಶ್ರೀಧರ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಅಶೋಕ್, ರವಿ, ಭಾರ್ಗವ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net