ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ

02chn1
Published on

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮದ್ಯಪಾನಕ್ಕೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆ್ ಇಂಡಿಯಾ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮದ್ ಮಾತನಾಡಿ, ದೇಶವನ್ನು ಸಂಪೂರ್ಣವಾಗಿ ಮದ್ಯಪಾನ ಮುಕ್ತ ಮಾಡಬೇಕು ಎಂಬುದು ಮಹಾತ್ಮ ಗಾಂಧಿಯವರ ಕನಸಾಗಿತ್ತು. ಅವರ ಆದರ್ಶ ಮತ್ತು ತತ್ವಗಳನ್ನು ಪಾಲನೆ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಗ್ರಾಮ, ಗ್ರಾಮಗಳಲ್ಲೂ ಮದ್ಯದಂಗಡಿ ತೆರೆಯಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಈಗಾಗಲೇ ಇರುವ ಮದ್ಯದಂಗಡಿ ಸಾಲದೂ ಎಂಬಂತೆ, ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚುವರಿ ಅಂಗಡಿಗಳನ್ನು ತೆರೆಯಲು ಮುಂದಾಗಿದೆ. ಒಂದು ಕಡೆ ಮನೆ ಯಜಮಾನಿಗೆ 2000 ರೂ. ಕೊಟ್ಟು, ಇನ್ನೊಂದು ಕಡೆ ಹೆಚ್ಚು ಮದ್ಯದಂಗಡಿಗಳನ್ನು ಪ್ರಾರಂಭಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಸಂಸಾರವನ್ನು ಹಾಳು ಮಾಡಲು ಸರ್ಕಾರವೇ ಮುಂದಾಗಿದೆ. ತೆರಿಗೆ ಸಂಗ್ರಹಿಸುವ ಹೆಸರಿನಲ್ಲಿ ಸರ್ಕಾರ ಹಗಲು ದರೋಡೆಗೆ ಮುಂದಾಗಿದೆ. ಇದು ಜನಪರ ಸರ್ಕಾರವಲ್ಲ, ಬದಲಾಗಿ ಲೂಟಿ ಸರ್ಕಾರವಾಗಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ನಿಜಧ್ವನಿ ಗೋವಿಂದರಾಜು, ಜನಶಕ್ತಿ ಸುರೇಶ್, ಸಯ್ಯದ್ ಆರ್ೀ, ಬಂಗಾರಸ್ವಾಮಿ, ನಗರಸಭಾ ಸದಸ್ಯರಾದ ಕಲೀಲ್, ಅ್ಸರ್, ನಯಾಜ್ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net