ತ್ವರಿತ ಕಾರ್ಯ ಪ್ರಗತಿಗೆ ಜಿಲ್ಲಾಧಿಕಾರಿ ಸೂಚನೆ

05chn2
Published on

ಚಾಮರಾಜನಗರ: ಕಂದಾಯ ಅಧಿಕಾರಿಗಳು ತ್ವರಿತ ಕಾರ್ಯಪ್ರಗತಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ತಹಶೀಲ್ದಾರ್ ಕಚೇರಿಗಳು, ಉಪವಿಭಾಗಾಧಿಕಾರಿಗಳ ಕಚೇರಿ ನ್ಯಾಯಾಲಯ ಪ್ರಕರಣಗಳ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಯವರು ಇ-ಆಫೀಸ್ ತಂತ್ರಾಂಶ ಅನುಷ್ಠಾನ ಹಾಗೂ ಇ-ಆಫೀಸ್ ಬಳಸುತ್ತಿರುವ ಕಡತಗಳ ವಿಲೇವಾರಿ, ಜಿಲ್ಲಾ ಜನತಾ ದರ್ಶನದ ದೂರುಗಳ ನಿರ್ವಹಣೆ ಬಗ್ಗೆ ವಿವರಗಳೊಂದಿಗೆ ಮಾಹಿತಿ ಪಡೆದು ಪ್ರಗತಿ ಪರಿಶೀಲಿಸಿದರು.

ಸಾಮಾಜಿಕ ಭದ್ರತೆ ಯೋಜನೆಗಳು, ಸಕಾಲ ಯೋಜನೆಗಳ ವಿವರಗಳನ್ನು ಪರಿಶೀಲಿಸಿದರು. ಕೃಷಿ ಭೂಮಿ, ಆರ್.ಟಿ.ಸಿ ಮಿಸ್ ಮ್ಯಾಚ್, ಸರ್ಕಾರಿ ಭೂಮಿಗಳ ವಿವರ, ಒತ್ತುವರಿ ವಿವರ, ಹೊಸ ಕಂದಾಯ ಗ್ರಾಮ ಹಾಗೂ ಇತರೆ ಕಂದಾಯ ವಿಷಯಗಳ ಸಂಬಂಧ ಸಭೆಯಲ್ಲಿ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪ ವಿಭಾಗಾಧಿಕಾರಿ ಮಹೇಶ್, ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net