ಗಾಂಜಾ ಮಾರಲು ಯತ್ನಿಸುತ್ತಿದ್ದವನ ಬಂಧನ

06 HANUR 1
Published on

ಹನೂರು: ತಾಲೂಕಿನ ಕೌದಳ್ಳಿ ಗ್ರಾಮದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಗುರುವಾರ ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಬಸವರಾಜು (52) ಬಂಧಿತ. ಈತ ಗುರುವಾರ ಸಂಜೆ ಕೌದಳ್ಳಿ ಸಮೀಪದ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿರುವ ಯಶಸ್ವಿ ಲೇಔಟ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಆಯುಕ್ತ ನಾಗಶಯನ ಹಾಗೂ ಉಪ ಅಧೀಕ್ಷಕ ಎಂ.ಡಿ ಮೋಹನ್‌ಕುಮಾರ್ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕ ಮಹದೇವ ಹಾಗೂ ಸಿಬ್ಬಂದಿ ದಾಳಿ ನಡೆಸಿ 500 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕ ಮಹೇಶ್, ಸಿಬ್ಬಂದಿ ಸಿದ್ದರಾಜು, ಸಂತೋಷ್‌ಕುಮಾರ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net