ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

education
Published on

ಚಾಮರಾಜನಗರ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 2023-24ನೇ ಸಾಲಿಗೆ ಪ್ರಥಮ ವರ್ಷ ಹಾಗೂ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೊಮಾ ಕೋರ್ಸ್‌ನ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕದ ಗದಗ-ಬೆಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಥಮ ವರ್ಷಕ್ಕೆ 22 ಅಭ್ಯರ್ಥಿಗಳಿಗೆ, ಎರಡನೇ ವರ್ಷಕ್ಕೆ 12 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಥಮ ವರ್ಷಕ್ಕೆ 17 ಅಭ್ಯರ್ಥಿಗಳಿಗೆ, ಎರಡನೇ ವರ್ಷಕ್ಕೆ 10 ಅಭ್ಯರ್ಥಿಗಳು, ಆಂಧ್ರಪ್ರದೇಶದ ನಲ್ಲೂರು ಜಿಲ್ಲೆಯ ವೆಂಕಟಗಿರಿಯ ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಥಮ ವರ್ಷಕ್ಕೆ ಮೂವರು ಅಭ್ಯರ್ಥಿಗಳು, ಎರಡನೇ ವರ್ಷಕ್ಕೆ ಮೂವರು ಅಭ್ಯರ್ಥಿಗಳು ಹಾಗೂ ಕೇರಳದ ಕಣ್ಣೂರಿನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಥಮ ವರ್ಷಕ್ಕೆ ಇಬ್ಬರು ಅಭ್ಯರ್ಥಿಗಳು ಮತ್ತು ಎರಡನೇ ವರ್ಷಕ್ಕೆ ಇಬ್ಬರು ಅಭ್ಯರ್ಥಿಗಳ ಪ್ರವೇಶಕ್ಕೆ ಅವಕಾಶವಿದೆ.

ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ದಿನಾಂಕ 2023ರ ಜುಲೈ 1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 15 ರಿಂದ 25ರ ವಯೋಮಿತಿ ನಿಗದಿ ಮಾಡಲಾಗಿದೆ.

ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೊಮಾ ಕೋರ್ಸ್‌ಗಾಗಿ ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 10+2 ಪಾಸ್+ (2 ವರ್ಷಗಳ ಐಟಿಐ) ತೇರ್ಗಡೆ ಹೊಂದಿರುವವರು ಎರಡನೇ ವರ್ಷದ ಡಿಪ್ಲೊಮಾ ಕೋರ್ಸ್ (ಡಿ.ಎಚ್.ಟಿ.ಟಿ) ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. 2023 ರ ಜುಲೈ 1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 27ರ ವಯೋಮಿತಿಯಲ್ಲಿರಬೇಕು.

ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಡೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ. ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು 2,500 ರೂ. ಶಿಷ್ಯವೇತನ ನೀಡಲಾಗುವುದು. ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸಿದ ಮೇಲೆ ಕಲ್ಪಿಸಲಾಗುವುದು. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸೆಲಿಂಗ್‌ಗಾಗಿ ಕರೆಯಲಾಗುವುದು. ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 31 ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬಹುದು.

ಅರ್ಜಿ ಹಾಗೂ ವಿವರಗಳಿಗೆ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿ (ದೂ.ಸಂ 08226-222883) ಸಂಪರ್ಕಿಸಬಹುದು. ಅಲ್ಲದೆ ಗದಗ-ಬೆಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲರು (ದೂ.ಸಂ 08372-297221) ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಿಲ್ಲಾ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net