

ಚಾಮರಾಜನಗರ: ಮನುಷ್ಯನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ, ಮಾನಸಿಕ ಆರೋಗ್ಯವೂ ಅಷ್ಟೇ ಪ್ರಾಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಶ್ರೀಧರ್ ಸಲಹೆ ನೀಡಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಜಿಲ್ಲಾ ಅಋಓಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಿಮ್ಸ್ ಕಾಲೇಜ್ ಆ್ ನರ್ಸಿಂಗ್, ಜೆಎಸ್‌ಎಸ್ ಸ್ಕೂಲ್ ಆ್ ನರ್ಸಿಂಗ್ ಹಾಗೂ ಮನೋನಿಧಿ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಪ್ರತಿಯೊಬ್ಬರೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಸಾಕಷ್ಟು ಜನರು ಒಬ್ಬೊಂಟಿಯಾಗಿ ಇರುವುದರಿಂದ ಮನಸ್ಸು ಚಂಚಲವಾಗಿ, ಮಾನಸಿಕ ಆರೋಗ್ಯ ಕೆಡುತ್ತದೆ. ಇಂತಹ ಸಂದರ್ಭದಲ್ಲಿ ಮನೋವೈದ್ಯರನ್ನು ಭೇಟಿಮಾಡಿ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಪ್ರಸ್ತುತ ಸಂದರ್ಭದಲ್ಲಿ ಸಮಸ್ಯೆಗಳು ಎದುರಾದಾಗ ಅದನ್ನು ಇತರರೊಂದಿಗೆ ಹೇಳಿಕೊಳ್ಳವ ಮೂಲಕ ಮನಸ್ಸನ್ನು ಹಗುರ ಮಾಡಿಕೊಳ್ಳಬಹುದಾಗಿದೆ. ಉತ್ತಮ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯುವ ಜನಾಂಗದ ಪಾತ್ರ ಬಹುದೊಡ್ಡದಿದೆ. ಈ ನಿಟ್ಟಿನಲ್ಲಿ ಇಂತಹ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೇ ಜೀವನ ಸಾಗಿಸಬೇಕು. ಯಾವುದೇ ವಿಚಾರಗಳನ್ನು ಮನಸ್ಸಿಗೆ ಹಚ್ಚಿಕೊಳ್ಳಬಾರದು. ಬದುಕಿನಲ್ಲಿ ಬರುವ ಸಮಸ್ಯೆಗಳನ್ನು ನಗುನಗುತ್ತಾ ಸ್ವೀಕರಿಸಬೇಕು. ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡರೆ ಎಲ್ಲರ ಜೀವನವು ಹರ್ಷದಾಯಕವಾಗಿರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಡಾ.ಪಿ.ಚಂದ್ರಶೇಖರ್, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಡಾ.ರಾಜೇಂದ್ರ, ಡಾ.ಗೋಕುಲ್, ಡಾ.ಉಮಾರಾಣಿ, ಚಂದ್ರಶೇಖರ್, ಎಚ್.ಪಾಟೀಲ್, ದೊರೆಸ್ವಾಮಿ ನಾಯಕ್, ಜೆಎಸ್‌ಎಸ್ ನರ್ಸಿಂಗ್ ಕಾಲೇಜಿನ ಮಹದೇವಸ್ವಾಮಿ, ನಮ್ರತಾ, ಕೃಷ್ಣಮೂರ್ತಿ, ಮಾನಸ, ಸೌಜನ್ಯ ಹಾಗೂ ಇತರರು ಭಾಗವಹಿಸಿದ್ದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಪ್ರಾರಂಭವಾದ ಜಾಥಾ ಕಾರ್ಯಕ್ರಮ ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಸಾಗಿ, ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಕೊನೆಯಾಯಿತು. ಜಾಥಾದಲ್ಲಿ ಸಿಮ್ಸ್ ಕಾಲೇಜ್ ಆ್ ನರ್ಸಿಂಗ್, ಜೆಎಸ್‌ಎಸ್ ಸ್ಕೂಲ್ ಆ್ ನರ್ಸಿಂಗ್ ಹಾಗೂ ಮನೋನಿಧಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.