ತಮಿಳುನಾಡು ಖಾಲಿ ಕ್ಯಾಸೆಟ್ ಇದ್ದಂತೆ

11chn2
Published on

ಚಾಮರಾಜನಗರ: ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ವತಿಂದ ಖಾಲಿ ಸಿಡಿ ಕ್ಯಾಸೆಟ್ ಹಿಡಿದು ಬುಧವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಖಾಲಿ ಸಿಡಿ ಕ್ಯಾಸೆಟ್ ಹಿಡಿದುಕೊಂಡು ಕೇಂದ್ರ ಸರ್ಕಾರ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವ ಮೂಲಕ ಇದೊಂದು ಖಾಲಿ ಕ್ಯಾಸೆಟ್ ಸರ್ಕಾರದಂತೆ ವರ್ತಿಸುತ್ತಿದೆ. ತಮಿಳುನಾಡು ಸರ್ಕಾರ, ಕೇಂದ್ರ ಸರ್ಕಾರ,ಕಾವೇರಿ ನೀರು ನಿರ್ವಹಣಾ ಮಂಡಳಿಯೂ ಖಾಲಿ ಕ್ಯಾಸೆಟ್‌ಗಳಂತಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು, ನೀರು ಹರಿಸಿ ಮತ್ತೇ ಮತ್ತೇ ರೈತರನ್ನು ಸಂಕಷ್ಟಕ್ಕೆ ದೂಡಬಾರದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಗಾಯದ ಮೇಲೆ ಬರೆ ಎಳೆಯುತ್ತಿದ್ದು, ವಾಸ್ತವ ಸ್ಥಿತಿ ಅರಿತು ಸಂಕಷ್ಟ ಸೂತ್ರ ಅನುಸರಿಸಲಿ ಎಂದು ಒತ್ತಾಯಿಸಿದರು.

ಇದೇ ರೀತಿ ರಾಜ್ಯಕ್ಕೆ ಅನ್ಯಾಯ ಮುಂದುವರಿದರೇ ತಮಿಳುನಾಡಿನ ಉತ್ಪನ್ನಗಳನ್ನು ಬಹಿಷ್ಕಾರ ಮಾಡುತ್ತೇವೆ. ತಮಿಳುನಾಡು ಗಡಿಯನ್ನು ಬಂದ್ ಮಾಡುತ್ತೇವೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಸಿ.ಎಂ.ಕೃಷ್ಣಮೂರ್ತಿ, ಮಹೇಶ್ ಗೌಡ, ರವಿಚಂದ್ರಪ್ರಸಾದ್ ಕಹಳೆ, ಲಿಂಗರಾಜು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net