ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ

5raju2
Published on

ಚಾಮರಾಜನಗರ: ರಾಜ್ಯ ಸರ್ಕಾರ ವಿದ್ಯುತ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ ಸಾಗಿ ರಥದ ಬೀದಿ, ದೊಡ್ಡ ಅಂಗಡಿ ಬೀದಿ ಮೂಲಕ ಶ್ರೀ ಭುವನೇಶ್ವರಿ ವೃತ್ತದ ಬಳಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಎಸ್.ಬಾಲರಾಜ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ರಾಜ್ಯದ ಜನರಿಗೆ ಮೋಸ ಮಾಡುತ್ತಿದೆ. ಈ ಭರವಸೆಗಳಿಂದಲೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಉಚಿತ ವಿದ್ಯುತ್ ನೀಡುತ್ತೇವೆ ಎನ್ನುತ್ತಲೇ ವಿದ್ಯುತ್ ಬಿಲ್ ಏರಿಕೆ ಮಾಡಿರುವುದು ಹಾಸ್ಯಾಸ್ಪದವಾಗಿದೆ. ಕೂಡಲೇ ಸರ್ಕಾರ ವಿದ್ಯುತ್ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್, ಉಪಾಧ್ಯಕ್ಷ ಪಿ.ವೃಷಬೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್, ಮುಖಂಡರಾದ ಎಂ.ರಾಮಚಂದ್ರು, ಡಾ.ಎ.ಆರ್.ಬಾಬು, ನಿಜಗುಣ ರಾಜು, ವೀರಭದ್ರಸ್ವಾಮಿ, ಬುಲೆಟ್ ಚಂದ್ರು, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net