ನಿಖೆ ಚುರುಕು ಗೊಳಿಸಲು ರೈತ ಒತ್ತಾಯ

16 HANUR 2
Published on

ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯ ರೆಕಾರ್ಡ್ ರೂಮ್‌ಗೆ ದುಷ್ಕರ್ಮಿಯೊಬ್ಬ ಬಾಗಿಲು ಮುರಿದು ಒಳನುಗ್ಗಿದ್ದು, ದಾಖಲೆಗಳು ಕಳ್ಳತನವಾಗಿರುವ ಬಗ್ಗೆ ಶಂಕೆಯಿದೆ. ತನಿಖೆ ಚುರುಕುಗೊಳಿಸಿ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ರೈತ ಸಂಘದ ಪದಾಧಿಕಾರಿಗಳು ಸೋಮವಾರ ಶಿರಸ್ತೇದಾರ್ ನಾಗೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ಕೊಳ್ಳೇಗಾಲ ರೈತ ಸಂಘದ ಮಾಜಿ ಅಧ್ಯಕ್ಷ ಗೌಡೇಗೌಡ ಮಾತನಾಡಿ, ಅ.9ರಂದು ರಾತ್ರಿ ದುಷ್ಕರ್ಮಿ ಬೈಕ್‌ನಲ್ಲಿ ಬಂದು ರೆಕಾರ್ಡ್ ರೂಮ್‌ನ ಬೀಗವನ್ನು ಮುರಿದು ಒಳನುಗ್ಗಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾನೆ. ಸಿಸಿ ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆಯಾಗಿದೆ. ದಾಖಲೆಗಳು ಕಳ್ಳತನವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ತಹಸೀಲ್ದಾರ್ ಪೋಲಿಸರಿಗೆ ದೂರು ನೀಡಿದ್ದಾರೆ. ಆದರೆ ತನಿಖೆ ಕಾರ್ಯ ಚುರುಕುಗೊಂಡಿಲ್ಲ. ಇದರಿಂದ ಅನುಮಾನ ವ್ಯಕ್ತವಾಗಿದ್ದು, ಭೂಗಳ್ಳರು ಹಾಗೂ ಮಧ್ಯವರ್ತಿಗಳಿಗೆ ಪುಷ್ಟಿ ನೀಡಿದಂತಿದೆ. ಈ ಬಗ್ಗೆ ತನಿಖೆ ಚುರುಕುಗೊಳಿಸಿ ತಪ್ಪಿತಸ್ಥನನ್ನು ಪತ್ತೆಹಚ್ಚಿ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಶಿರಸ್ತೇದಾರ್ ನಾಗೇಂದ್ರ ಮಾತನಾಡಿ, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಮುತುರ್ವಜಿ ವಹಿಸಲಾಗಿದೆ. ಮನವಿಯನ್ನು ಜಿಲ್ಲಾಧಿಕಾರಿ ಅವರಿಗೆ ಕಳುಹಿಸಲಾಗುವುದು ಎಂದು ತಿಳಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಅಮ್ಜಾದ್‌ಖಾನ್, ರೈತ ಮುಖಂಡ ರಾಜೇಂದ್ರ, ವೆಂಕಟೇಶ್, ಪೆರುಮಾಳ್, ಶೌಕತ್, ಬಸವರಾಜು, ಅರ್ಪುದರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net