ಬಲೆಗೆ ಬಿದ್ದ ಚಿರತೆ

16kgl-1
Published on

ಕೊಳ್ಳೇಗಾಲ: ತಾಲೂಕಿನ ಗುಂಡೇಗಾಲ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಎರಡು ತಿಂಗಳಿನಿಂದ ಆಗಾಗ ಕಾಣಿಸಿಕೊಳ್ಳುವ ಮೂಲಕ ಜನ ವಲಯದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ.

ಗ್ರಾಮದ ಮಂಜುನಾಥ್ ಎಂಬುವರ ಜಮೀನಿನಲ್ಲಿ ಇರಿಸಿದ್ದ ಬೋನಿನಲ್ಲಿ ಸೋಮವಾರ ಹೆಣ್ಣು ಚಿರತೆ ಸೆರೆಯಾಗಿದೆ. ಗುಂಡೇಗಾಲ, ಪಾಳ್ಯ ಹಾಗೂ ಮಧುವನಹಳ್ಳಿ ಸುತ್ತಮುತ್ತ ಆಗಿಂದ್ದಾಗೆ ಕಾಣಿಸಿಕೊಳ್ಳುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net