ಕಡ್ಲೆಪುರಿ ಎರಚಿ ಪ್ರತಿಭಟನೆ

17chn12
Published on

ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಲಾಯಿತು.

ನಗರದ ನೃಪತುಂಗ ವೃತ್ತದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಮಂಗಳವಾರ ಜಮಾಯಿಸಿದ ಪ್ರತಿಭಟನಾಕಾರರು ಕಡ್ಲೆಪುರಿ ಎರಚಿ ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ ಇಂದಿಗೆ 33 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು. ಇಂದು ಕೂಡ ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ರಾಜ್ಯ ಪಾಲಿಗೆ ಸತ್ತುಹೋಗಿದೆ ಎಂದು ಕಡ್ಲೆಪುರಿ ಎರಚಿ ಪ್ರತಿಭಟನೆ ಮಾಡಲಾಗಿದೆ ಎಂದರು. ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದರಾಜು, ಗು.ಪುರುಷೋತ್ತಮ್, ರಾಜಪ್ಪ, ತಾಂಡವಮೂರ್ತಿ, ವೀರಭದ್ರ, ಸೋಮವಾರಪೇಟೆ ಮಂಜು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net