ಗ್ರಾಮಗಳ ಅಭಿವೃದ್ಧಿಗೆ ಒತ್ತು

06raju8
Published on

ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

ನಗರದ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ ಕೆಂಪನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರಿಂದ ಮಂಗಳವಾರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕ್ಷೇತ್ರದ ಗ್ರಾಮ ಪಂಚಾಯಿತಿಗಳಿಗೆ ಪ್ರವಾಸ ಕೈಗೊಂಡು ಜನರಿಂದ ಆಹವಾಲುಗಳನ್ನು ಸ್ವೀಕರಿಸಿ ಇಲಾಖಾವಾರು ಅಧಿಕಾರಿಗಳಿಂದ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಕೊಳ್ಳೇಗಾಲ ಕ್ಷೇತ್ರದ ಮತದಾರರು 1 ಲಕ್ಷಕ್ಕೂ ಅಧಿಕ ಮತಗಳ ನೀಡಿ ಗೆಲ್ಲಿಸುವ ಮೂಲಕ ಚಿನ್ನದಂತಹ ಅಧಿಕಾರವನ್ನು ನೀಡಿದ್ದಾರೆ. ಜನಸೇವಕನಾಗಿ ಅವರ ಋಣ ತೀರಿಸಲು ಶ್ರಮಿಸಲಾಗುವುದು ಎಂದರು. ಪಕ್ಷದ ಮುಖಂಡ ಡಿ.ಎನ್.ನಟರಾಜು, ಎಪಿಎಂಸಿ ನಿರ್ದೇಶಕ ಆಲೂರು ಪ್ರದೀಪ್, ಗ್ರಾಪಂ ಸದಸ್ಯರಾದ ಆರ್.ಮಾದೇಶ್, ಆರ್.ಸೋಮಣ್ಣ, ಲಕ್ಷ್ಮಣ್, ಡಿಎಸ್‌ಎಸ್ ಜಿಲ್ಲಾ ಸಯೋಜಕ ಕೆ.ಎಂ.ನಾಗರಾಜು, ತಾಪಂ ಮಾಜಿ ಸದಸ್ಯ ಆರ್.ಮಹದೇವ, ಕಂದಹಳ್ಳಿ ನಂಜುಂಡಸ್ವಾಮಿ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net