ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿ

s.m
Published on

ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾ.ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ ತಿಳಿಸಿದರು.

ಕಳೆದ 17 ವರ್ಷಗಳಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಾ ಬಂದಿದ್ದು, ಪಕ್ಷ ವಹಿಸಿದ ಎಲ್ಲಾ ಜವಾಬ್ದಾರಿ, ಸ್ಥಾನಮಾನಗಳನ್ನು ಸಮರ್ಥವಾಗಿ ನಿಭಾಯಿಸುತ್ತಾ ಬಂದಿದ್ದೇನೆ. ರಾಜ್ಯದ ನಾಯಕರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸತತ ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಆಯ್ಕೆಯಾಗಿದ್ದು, ಮೊದಲ ಅಧ್ಯಕ್ಷನಾಗಿ ಜನಪರ ಸೇವೆ ಸಲ್ಲಿಸಿದ್ದೇನೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಲು ಅವಕಾಶ ಇದ್ದಾಗಲೂ ಬಂಡಾಯ ಏಳದೇ ಪಕ್ಷವನ್ನು ತೊರೆಯದೇ ನಿಷ್ಠಾವಣತನಾಗಿ ನಡೆದುಕೊಂಡಿದ್ದೇನೆ. ಕ್ಷೇತ್ರದ ಜನರು ಕೂಡ ಟಿಕೆಟ್ ಕೇಳುವಂತೆ ಒತ್ತಡ ಏರುತ್ತಿದ್ದಾರೆ. ವರಿಷ್ಠರು ಕೂಡ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದರು.

ಮೈಸೂರು ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷ್ವಹಿಸಿದ ಕೆಲಸವನ್ನು ಮಾಡಿದ್ದೇನೆ. ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ 2 ಬಾರಿ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋತಿದ್ದೇನೆ. ಆದರೆ 2018 ಮತ್ತು 2023 ರ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ಆಶಾಭಾವನೆ ಇದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಮುಖಂಡ ವೀರಭದ್ರಸ್ವಾಮಿ, ಚಿನ್ನಮುತ್ತು, ಮಾದಶೆಟ್ಟಿ, ರಾಜಗೋಪಾಲ, ನಿಂಗನಾಯಕ, ನಲ್ಲೂರು ಪರಮೇಶ್, ಮಲ್ಲದೇವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net