

ಚಾಮರಾಜನಗರ: ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳ ಪ್ರತಿಭಟನೆಗಳಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ 35 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು. ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ, ತಮಿಳುನಾಡು, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ಮಾಡಲಾಗಿದೆ ಎಂದರು
ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸದೆ ಮೌನವಾಗಿದೆ. ತಮಿಳುನಾಡು ಸರ್ಕಾರ ಪದೇಪದೇ ಕಾವೇರಿ ನೀರಿನ ವಿಚಾರದಲ್ಲಿ ಕ್ಯಾತೆ ತೆಗೆದು ತನ್ನ ತೀಟೆ ತೀರಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ವೆಂ.ರಾಜ್ ಗೋಪಾಲ್, ನಿಜದ್ವನಿಗೋವಿಂದರಾಜು, ನಂಜುಂಡಶೆಟ್ಟಿ, ಗು.ಪುರುಷೋತ್ತಮ್, ತಾಂಡವಮೂರ್ತಿ, ರಾಜಪ್ಪ, ಲಿಂಗರಾಜು, ತಾಂಡವಮೂರ್ತಿ, ವೀರಭದ್ರ ಹಾಗೂ ಇತರರು ಭಾಗವಹಿಸಿದ್ದರು.