ಜಿಲ್ಲಾ ಉಪಾಧ್ಯಕ್ಷರಾಗಿ ಎಂ.ಆನಂದ್ ನೇಮಕ

25chn4
Published on

ಚಾಮರಾಜನಗರ: ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಎಂ. ಅನಂದ್ ನೇಮಕಗೊಂಡಿದ್ದಾರೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಹಾಗೂ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡರ ಅನುಮೋದನೆಯೊಂದಿಗೆ ಅನಂದ್ ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ತಮಗೆ ವಹಿಸಲಾಗಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ಯಶ್ವಸಿಯಾಗಿ ನಿರ್ವಹಿಸಿ, ಪಕ್ಷದ ಸಂಘಟನೆಗೆ, ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವಂತೆ ಸೂಚಿಸಿಲಾಗಿದೆ. ತಮಗೆ ಹೆಚ್ಚಿನ ಯಶಸ್ಸು ದೊರೆಯಲೆಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಎಸ್.ಮಹೇಶ್ ನೇಮಕಾತಿ ಆದೇಶಪತ್ರದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net