

ಚಾಮರಾಜನಗರ : ಕರ್ನಾಟಕದ ಉಳಿವಿಗಾಗಿ ಪ್ರತಿಯೊಬ್ಬರೂ ಅವಿರತವಾಗಿ ಶ್ರಮವಹಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್ ತಿಳಿಸಿದರು.
ನಗರದ ಡಿವಿಯೇಷನ್ ರಸ್ತೆಯಲ್ಲಿರುವ ಎಸ್‌ಡಿಪಿಐ ಜಿಲ್ಲಾ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸುವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕರ್ನಾಟಕದ ಉಳಿವಿಗಾಗಿ ಕೇವಲ ಕನ್ನಡ ಭಾಷೆ ಮಾತನಾಡಿದರೆ ಸಾಲದು. ಸಮಗ್ರ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲರೂ ಅವಿರತ ಶ್ರಮ ವಹಿಸಬೇಕು. ರಾಜಕೀಯ ಪಕ್ಷಗಳು ತಮ್ಮ ಸ್ವಹಿತಾಸಕ್ತಿ ಬದಿಗಿಟ್ಟು ರಾಜ್ಯದ ಹಿತಾಸಕ್ತಿಗೆ ಪ್ರಾಮುಖ್ಯತೆ ಕೊಡಬೇಕು ಎಂದರು.
ಜಿಲ್ಲಾ ಉಪಾಧ್ಯಕ್ಷ ಸೈಯದ್ ಆರೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್, ಕಾರ್ಯದರ್ಶಿ ಜಬೀನೂರ್, ಕಲೀಲ್ವುಲ್ಲಾ, ಜಿಲ್ಲಾ ಖಜಾಂಚಿ ನಯಾಜ್‌ವುಲ್ಲಾ, ನಗರಸಭಾ ಸದಸ್ಯರಾದ ಮೊಹಮ್ಮದ್ ಅಮೀಕ್, ಪದಾಧಿಕಾರಿಗಳು ಇದ್ದರು.