ಬೇವಿನಸೊಪ್ಪು ಪ್ರದರ್ಶಿಸಿ ವಿನೂತನ ಪ್ರತಿಭಟನೆ

01chn15
Published on

ಚಾಮರಾಜನಗರ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಸರ್ಕಾರದ ನಡೆ ಖಂಡಿಸಿ ಕನ್ನಡಪರ ಸಂಘಟನೆ ವತಿಯಿಂದ ಬುಧವಾರ ಬೇವಿನಸೊಪ್ಪು ಮತ್ತು ಸಿಹಿ ಪ್ರದರ್ಶಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು, ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೇವಿನಸೊಪ್ಪು, ಸಿಹಿ ಪ್ರದರ್ಶಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ 50 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ ಸಿಹಿ ಕೊಟ್ಟು, ಕರ್ನಾಟಕದ ಪಾಲಿಗೆ ಕಹಿ ಕೊಟ್ಟು ಅನ್ಯಾಯ ಮಾಡಿದೆ ಎಂದು ಅರೋಪಿಸಿದರು. ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದರಾಜು, ಚಾ.ವೆಂ.ರಾಜ್‌ಗೋಪಾಲ್, ಸೋಮವಾರಪೇಟೆ ಮಂಜು, ನಂಜುಂಡಸ್ವಾಮಿ, ಬಂಗಾರು, ಚಾ.ಹ.ರಾಮು, ಗು.ಪುರುಷೋತ್ತಮ್, ವೀರಭದ್ರ, ತಾಂಡವಮೂರ್ತಿ, ರಾಜಪ್ಪ, ಮೂಡ್ಲುಪುರ ಪ್ರಕಾಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net