

ಚಾಮರಾಜನಗರ: ರೈತರಿಗೆ ಬಾಕಿ ಇರುವ ಕಬ್ಬು ಹಣ ಬಿಡುಗಡೆ ಹಾಗೂ ಇನ್ನಿತರೆ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ನ.9 ರಂದು ಮೈಸೂರಿನಲ್ಲಿರುವ ಮುಖ್ಯಮಂತ್ರಿ ನಿವಾಸದ ಮುಂದೆ ನಿರಂತರ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ರಾಜ್ಯ ಕಬ್ಬುಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರದ ಆದೇಶದಂತೆ ಮೈಸೂರು-ಚಾಮರಾಜನಗರ ಜಿಲ್ಲೆಯ ಕಬ್ಬು ಬೆಳೆಗಾರರ ಕಳೆದ ವರ್ಷದ ಬಾಕಿ ಪ್ರತಿಟನ್‌ಗೆ 150 ರೂ.ನಂತೆ ಎರಡು ಜಿಲ್ಲೆಗಳ ರೈತರಿಗೆ ಸುಮಾರು 25 ಕೋಟಿ ರೂ.ಗೂ ಹೆಚ್ಚು ಹಣ ಬಾಕಿ ಬರಬೇಕಿದೆ. ಮುಖ್ಯಮಂತ್ರಿಗಳ ಸ್ವ ಕ್ಷೇತ್ರದಲ್ಲೇ ಸುಮಾರು 25 ಕೋಟಿ ರೂ.ಗೂ ಅಧಿಕ ಹಣವನ್ನು ರೈತರಿಗೆ ಕೊಡಿಸುವಲ್ಲಿ ಮುಖ್ಯಮಂತ್ರಿಗಳು ವಿಫಲವಾಗಿರುವುದರಿಂದ ನ.9 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದ ಮುಂದೆ ನಿರಂತರ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ರಾಜ್ಯ ಸರ್ಕಾರ ಕೃಷಿಗೆ ಸಮರ್ಪಕ ವಿದ್ಯುತ್ ನೀಡುವಲ್ಲಿ ವಿಲವಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ 5 ಗಂಟೆ ಮಾತ್ರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ರೈತರಿಗೆ ಸಾಕಷ್ಟು ನಷ್ಟ ಉಂಟಾಗುತ್ತಿದೆ. ರೈತರಿಗೆ ಬೆಳೆನಷ್ಟವನ್ನು ನೀಡದೇ ಅನ್ಯಾವೆಸಗಿದೆ. ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ಮೂಲಕ ಈ ಭಾಗದ ರೈತರಿಗೆ ನಷ್ಟವನ್ನು ಉಂಟುಮಾಡಿದೆ. ಜಿಲ್ಲೆಗಳಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಮನೆಯ ಮುಂದೆ ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜ್, ಪ್ರಧಾನ ಕಾರ್ಯದರ್ಶಿ ಮಲೆಯೂರು ಹರ್ಷ, ಬಸವರಾಜಪ್ಪ, ಮಹೇಂದ್ರ, ಸತೀಶ್, ಉಡಿಗಾಲ ಗ್ರಾಮ ಘಟಕದ ಅಧ್ಯಕ್ಷ ಮಂಜುನಾಥ್, ಮಹಾದೇವಸ್ವಾಮಿ, ಚೇರ್ಮನ್‌ಗುರು, ಅಡುಗೆ ಸತೀಶ್, ಅರಳಿ ಕಟ್ಟೆ ಗ್ರಾಮ ಘಟಕದ ಅಧ್ಯಕ್ಷ ಕುಮಾರ್, ನಂದೀಶ್, ಶ್ರೀಕಂಠ ಹಾಗೂ ಇತರರು ಹಾಜರಿದ್ದರು.