ಚಾವಟಿಯಿಂದ ಹೊಡೆದುಕೊಂಡು ಪ್ರತಿಭಟನೆ.

05chn5
Published on

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಚಾವಟಿಯಿಂದ ಹೊಡೆದುಕೊಳ್ಳುವ ಮೂಲಕ ಭಾನುವಾರ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾವಟಿಯಿಂದ ಹೊಡೆದುಕೊಂಡು, ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ಕಳೆದ 53ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಕಾವೇರಿ ನಿರ್ವಹಣಾ ಮಂಡಳಿಯು ತಮಿಳುನಾಡಿನ ಪರವಾಗಿದ್ದು, ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ನಮ್ಮನ್ನು ಚಾವಟಿಯಿಂದ ಹೊಡೆದುಕೊಳ್ಳುವಂತೆ ಮಾಡಿದೆ ಎಂದರು.

ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಿಜದ್ವನಿಗೋವಿಂದರಾಜು, ಗು.ಪುರುಷೋತ್ತಮ ನಂಜುಂಡಸ್ವಾಮಿ, ಚಾ.ಹ.ರಾಮು, ರಾಮಸಮುದ್ರ ಸುರೇಶ್, ತಾಂಡವಮೂರ್ತಿ, ವೀರಭದ್ರ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net