ಮಾತೃಭಾಷೆ ಧೈರ್ಯವನ್ನು ಕಲಿಸಿಕೊಡುತ್ತದೆ

05chn7
Published on

ಚಾಮರಾಜನಗರ: ಕನ್ನಡ ನಾಡು, ನುಡಿ, ಸಂಸ್ಕೃತಿಯ ರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕು ಎಂದು ಜ್ಞಾನಾಮೃತ ಅಕಾಡೆಮಿ ಅಧ್ಯಕ್ಷ ಮಂಜುನಾಥ್ ತಿಳಿಸಿದರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜ್ಞಾನಾಮೃತ ಅಕಾಡೆಮಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕನ್ನಡ ಉಳಿಸಿ-ಕನ್ನಡ ಬೆಳೆಸಿ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಅನೇಕ ಮಹನೀಯರಿಂದ ಕರ್ನಾಟಕ ರಾಜ್ಯವು ಉದಯವಾಯಿತು. ನಮ್ಮ ರಾಜ್ಯ ಸಂಸ್ಕೃತಿ, ಪರಂಪರೆ ಹಾಗೂ ಭಾಷೆಯನ್ನು ಉಳಿಸಿಬೆಳೆಸುವ ಕೆಲಸವಾಗಬೇಕು. ಕನ್ನಡ ಸಾಹಿತ್ಯವನ್ನು ಹೆಚ್ಚಾಗಿ ಓದುವ ಮೂಲಕ ಎಲ್ಲರೂ ಕನ್ನಡ ಪ್ರೇಮಿಗಳಾಗಬೇಕು. ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಕನ್ನಡ ಮಾತನಾಡುವವರು ಇದ್ದಾರೆ. ಈ ನೆಲದ ಜಾನಪದ ಸಂಸ್ಕೃತಿಯನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಕಾರ್ಯಕಗ್ರಮದಲ್ಲಿ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರೂ. ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಾದ ಪ್ರತಾಪ್, ಭರತ್, ಕಿರಣ್, ಒಕಾಶಾ ಸಾಹಿದ್, ತಾಯೀಬ್, ರಾಜೇಶೇಖರ್, ನಾಗೇಂದ್ರ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು.

ಜ್ಞಾನಾ ಮೃತ ಅಕಾಡೆಮಿ ಕಾರ್ಯದರ್ಶಿ ಗಳು ರಾಜೇಶ್, ಶಿಕ್ಷಕರಾದ ಅನಿತ್, ದೊಡ್ಡಮ್ಮ, ಪ್ರಭು ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net