

ಚಾಮರಾಜನಗರ: ರಾಜ್ಯದಲ್ಲಿ ಸರ್ಕಾರಿ ನೌಕರರ ಮಕ್ಕಳ ಹೆಚ್ಚಿನ ವಿದ್ಯಾಭಾಸಕ್ಕೆ ಸಂಘದ ವತಿಯಿಂದ ಹಲವು ಅನುಕೂಲಗಳನ್ನು ಮಾಡಲಾಗುತ್ತಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ಚಾಮರಾಜನಗರ ಜಿಲ್ಲೆಯ ನೂತನ ಶಾಸಕರು, ಸಚಿವರಿಗೆ ಸನ್ಮಾನ ಹಾಗೂ ಸರ್ಕಾರಿ ನೌಕರರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 138 ವಿದ್ಯಾರ್ಥಿಗಳು ಶೆ.90 ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಂತಹ ಮಕ್ಕಳನ್ನು ಗುರುತಿಸುವುದು ನಮ್ಮೆಲ್ಲರ ಕರ್ತವ್ಯ. ವಿದ್ಯಾರ್ಥಿಗಳನ್ನು ಪ್ರೋತಾಹಿಸುವ ನಿಟ್ಟಿನಿಂದ 2020ನೇ ವರ್ಷದಿಂದ ನಗದು ಪ್ರತಿಭಾ ಪುರಸ್ಕಾರ ನೀಡುತ್ತಾ ಬಂದಿದ್ದೇವೆ. ವಿದ್ಯಾರ್ಥಿಗಳು ನಿಮಗೆ ಉತ್ತೇಜನ ನೀಡುವ ತಂದೆ, ತಾಯಿಯನ್ನು ಮರೆಯ ಬಾರದು ಎಂದು ಹೇಳಿದರು.
ಒಂದು ಸಂಘವನ್ನು ಬೆಳೆಸುವುದು ಬಹಳ ಕಷ್ಟದ ಕೆಲಸ ರಾಜ್ಯದಲ್ಲಿಯೇ ಕರ್ನಾಟಕ ಸರ್ಕಾರಿ ನೌಕರರ ಸಂಘವು ನೌಕರರಿಗೆ ಹಲವು ಅನುಕೂಲಗಳನ್ನು ಮಾಡುತ್ತ ಬಂದಿದೆ. ಮುಂದಿನ ದಿನಗಳಲ್ಲಿ 7ನೇ ವೇತನ ಆಯೋಗವನ್ನು ಕೊಡಿಸುವ ನಿಟ್ಟಿನಲ್ಲಿ ಸಂಘವು ಶ್ರಮಿಸುತ್ತಿದೆ. ಪ್ರತಿಯೊಬ್ಬ ಸದಸ್ಯರು ಸಂಘಟನೆಯನ್ನು ನಮ್ಮ ಕುಟುಂಬ ಎಂದು ತಿಳಿಯಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸಗಳನ್ನು ಮಾಡೋಣ ಎಂದರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ರಾಜ್ಯದ ಸಮಗ್ರ ಅಭಿವೃದ್ದಿಯಲ್ಲಿ ಸಕರ್ಅರಿ ನೌಕರರ ಕೊಡುಗೆ ದೊಡ್ಡದಿದೆ. ಪ್ರಸ್ತುತ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಸೇವೆಗಳನ್ನು ನೀಡುವುದು ಕಷ್ಟದ ಕೆಲಸ. ಆದರೆ ದೇಶದ ಅಭಿವೃದ್ದಿಗೆ ಪ್ರಾಮಾಣೀಕವಾಗಿ ಕರ್ತವ್ಯ ನಿಔಹಿಸಬೇಕಾಗುತ್ತದೆ. ರಾಜ್ಯ ಸರ್ಕಾರಿ ನೌಕರರ ಸಂಘವು ಉತ್ತಮ ಕೆಲಸಗಳನ್ನು ಮಾಡುತ್ತ ಬಂದಿದೆ ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಆರೋಗ್ಯ ಅಧಿಕಾರಿ ಚಿದಂಬರ, ಕೇಂದ್ರ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಶ್ರೀನಿವಾಸ್, ಖಜಾಂಚಿ ಆರ್.ಶ್ರೀನಿವಾಸ್, ಕಾರ್ಯಾಧ್ಯಕ್ಷ ಮಲ್ಲಿಕಾರ್ಜನ ಬಿ.ಬಳ್ಳಾರಿ, ಗೌರವಾಧ್ಯಕ್ಷ ಬಿ.ಎಚ್.ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷ ಎಂ.ವಿ.ರುದ್ರಪ್ಪ, ಬಸವರಾಜು,ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಮಹದೇವಸ್ವಾಮಿ, ಖಜಾಂಚಿ ಎಸ್.ಮಹದೇವಯ್ಯ, ಎಚ್.ಎಸ್.ಶಿವಮೂರ್ತಿ, ಸಿದ್ದರಾಜು, ಶೈಲೇಂದ್ರ, ಎಂ.ಸಿ.ಮಂಜುನಾಥ್, ಜಿ.ವಿನಯ್, ಸಿ.ಎಂ.ಶಿವಕುಮಾರ್, ಎಂ.ಆರ್.ಯೋಗೇಶ್ ಹಾಗೂ ಇತರರು ಉಪಸ್ಥಿತರಿದ್ದರು.