ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ

06chn3
Published on

ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡಾ ಕ್ಷೇತ್ರದಲ್ಲೂ ಸಾಧನೆ ಮಾಡಬೇಕೆಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಸಲಹೆ ನೀಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು ವತಿಯಿಂದ 2023-24ನೇ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡಾ ಚಟುವಟಿಕೆಗಳು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಪಠ್ಯ ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಹೆಸರು ಬರಲಿದೆ ಎಂದು ಕಿವಿಮಾತು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಪ್ರಸನ್ನ ಮಾತನಾಡಿ, ಕಾಲೇಜು ಹಂತದ ಕ್ರೀಡಾಕೂಟಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು. ಈ ಮೂಲಕ ಶಿಕ್ಷಣ ಕ್ಷೇತ್ರದ ಜತೆಗೆ ಕ್ರೀಡೆಯಲ್ಲೂ ಸಹ ಸಾಧನೆ ಮಾಡಲು ಇದು ಉತ್ತಮ ವೇದಿಕೆಯಾಗಿದ್ದು, ಈ ಅವಕಾಶವನ್ನು ಬಳಸಿಕೊಂಡು ಕ್ರೀಡಾಕೂಟದಲ್ಲಿ ಕ್ರೀಡಾ ಮನೋಭಾವನೆ ಮತ್ತು ಉತ್ಸುಕತೆಯಿಂದ ಸ್ಪರ್ಧಿಸಿ ಎಂದರು.

ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಪ್ರಾಂಶುಪಾಲಎಂ.ಸೋಮಣ್ಣ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಭಾಗವಹಿಸುವಿಕೆ ಮುಖ್ಯ. ಹೀಗಾಗಿ ಕ್ರೀಡೆಯಲ್ಲಿ ಭಾಗವಹಿಸುವವರು ಸಕರಾತ್ಮಕ ಮನೋಭಾವವನೆಯಿಂದ ಉತ್ತಮವಾಗಿ ಆಟವನ್ನು ಆಡುವ ಮೂಲಕ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದು ಹೇಳಿದರು.

ಅಪಾರ ಜಿಲ್ಲಾಧಿಕಾರಿ ಗೀತಾ ಹುಡೇದ್, ಪ್ರಾಂಶುಪಾರ ಸಂಘದ ಅಧ್ಯಕ್ಷ ಪ್ರಮೋದ್, ಕಾರ್ಯದರ್ಶಿ ಬಸವರಾಜಪ್ಪ, ಖಲೀಂ ಉಲ್ಲಾಖಾನ್, ಉಪಾನ್ಯಾಸಕರಾದ ರಾಮಕೃಷ್ಣ, ಮಧು, ಮಾದಪ್ಪ, ರಂಗಸ್ವಾಮಿ, ಸುನೀಲ್, ಮಹದೇವಸ್ವಾಮಿ, ಸವಿತಾ, ಶೀಲಾ ಮತ್ತು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net