ಕುದೇರು ಕಾಲೇಜಿನಲ್ಲಿ ಕನ್ನಡ ಮಾಸಾಚರಣೆ

06chn4
Published on

ಚಾಮರಾಜನಗರ:ಕನ್ನಡದ ಸೇವೆಗೆ ನಮ್ಮ ಬದುಕನ್ನು ಮುಡಿಪಾಗಿಡೋಣ ಎಂದು ಉಪನ್ಯಾಸಕ ಮಹದೇವಪ್ರಭು ಕರೆ ನೀಡಿದರು.

ತಾಲೂಕಿನ ಕುದೇರಿನ ಸರ್ಕಾರಿ ಎಂ.ಸಂಗಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜೆ.ಎಸ್.ಬಿ ಪ್ರತಿಷ್ಠಾನ ಸೋಮವಾರ ಆಯೋಜಿಸಿದ್ದ ‘ಕನ್ನಡ ಮಾಸಾಚರಣೆ-2023’ ಕಾರ್ಯಕ್ರಮವನ್ನು ಕನ್ನಡ ತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಹೃದಯ ಭಾಷೆಯಾಗಲಿ ಹಾಗೂ ಮನಸ್ಸಿನ ಭಾಷೆಯಾಗಲಿ. ನಮಗೆ ಸ್ವರ್ಗ ಕರ್ನಾಟಕ ಮತ್ತು ಕನ್ನಡ ಭೂಮಿ. ಕರ್ನಾಟಕ ಏಕೀಕರಣಕ್ಕೆ ಹೋರಾಟ ಮಾಡಿದ ಲಕ್ಷಾಂತರ ಜನರನ್ನು ನೆನೆಯಬೇಕು. ಕನ್ನಡವನ್ನು ಮರೆತರೆ ತಾಯಿಯನ್ನು ಮರೆತಂತೆ. ಕನ್ನಡ-ಕನ್ನಡಿಗ-ಕರ್ನಾಟಕ ನಮ್ಮ ಹೃದಯದ ಹಾಗೂ ಮನದಾಳದ ಮಿಡಿತವಾಗಬೇಕು ಎಂದರು.

ನಮ್ಮ ರಾಜ್ಯದ ಸುವರ್ಣ ಪರಂಪರೆಯನ್ನು ನೆನೆಯೋಣ. ರಾಜ್ಯದ ಕೀರ್ತಿ ಪತಾಕೆಯನ್ನು ಇನ್ನಷ್ಟು ಎತ್ತರಕ್ಕೆ ಹಾರಿಸಲು ಎಲ್ಲರೂ ಶ್ರಮಿಸೋಣ. ಸ್ವಾಭಿಮಾನದ ಜತೆಗೆ ಸೋದರ ಭಾಷೆಗಳನ್ನು ಗೌರವಿಸುವ ವಿಶಾಲ ಭಾವನೆ ನಮ್ಮೆಲ್ಲರದ್ದಾಗಿದ್ದು, ಈ ಮೂಲಕ ಭಾಷಾ ಸಾಮರಸ್ಯ, ಸಾಂಸ್ಕೃತಿಕ ಸಾಮರಸ್ಯ ರೂಪಿತವಾಗಿರುವುದು ಕನ್ನಡ ನಾಡಿನ ಹಿರಿಮೆಯಾಗಿದೆ. ಕನ್ನಡ ಸಾರಸ್ವತ ಲೋಕವು 8 ಜ್ಞಾನಪೀಠ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿರುವುದು ಕನ್ನಡ ಭಾಷೆಯ ಉತ್ಕೃಷ್ಟತೆ ಹಾಗೂ ಗರಿಮೆಯನ್ನು ಬಿಂಬಿಸುತ್ತದೆ ಎಂದು ಹೇಳಿದರು.

ಜೆಎಸ್‌ಬಿ ಪ್ರತಿಷ್ಠಾನದ ಅಧ್ಯಕ್ಷ ಎಸ್.ಶಶಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕನ್ನಡ ಪುಸ್ತಕಗಳ ಬಹುಮಾನ, ಜತೆಗೆ ಶಾಲೆಯ ಎಲ್ಲ ಮಕ್ಕಳಿಗೆ ಕನ್ನಡ ಕಿರುಪುಸ್ತಕ ನೀಡಿ, ಕನ್ನಡ ಓದನ್ನು ಪ್ರೋತ್ಸಾಹಿಸಲಾಯಿತು. ಉಪನ್ಯಾಸಕರಾದ ಮಂಜುನಾಥ, ಮಣಿಕಂಠ, ರಾಜೇಂದ್ರ, ಪುಷ್ಪಲತಾ, ಪಲ್ಲವಿ, ಜೋಸ್ೆ, ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net